ನವದೆಹಲಿ : ರಾಜ್ಯಕ್ಕೆ ನಿತ್ಯವೂ 1200 ಮೆಟ್ರಿಕ್ ಟನ್ ಆಮ್ಲಜನಕ ಒದಗಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಿದ್ರೆ, ಕೇಂದ್ರ ಸರಕಾರ ಭಾರೀ ಮುಖಭಂಗ ಅನುಭವಿಸಿದೆ.
ಕರ್ನಾಟಕದಲ್ಲಿ ಆಕ್ಸಿಜನ್ ಕೊರತೆಯಿಂದ ಜನರ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ನಿತ್ಯವೂ 1,200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಮೊರೆಹೋಗಿತ್ತು.
ಆದರೆ ಸುಪ್ರೀಂ ಕೋರ್ಟ್ ಇದೀಗ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ. ಹೈಕೋರ್ಟ್ ನೀಡಿರುವ ಆದೇಶ ಸರಿಯಾಗಿಯೇ ಇದೆ. 4 ದಿನಗಳ ಒಳಗಾಗಿ ಕರ್ನಾಟಕ ರಾಜ್ಯದ ಬೇಡಿಕೆಯನ್ನು ಈಡೇರಿಸಬೇಕು ಎಂದು ಆದೇಶಿಸಿದೆ. ಈ ಮೂಲಕ ಕೇಂದ್ರ ಸರಕಾರಕ್ಕೆ ಆಕ್ಸಿಜನ್ ವಿಚಾರದಲ್ಲಿ ಹಿನ್ನಡೆಯಾಗಿದೆ.
