ಬೆಂಗಳೂರು : ರಾಜ್ಯ ಸರಕಾರ ಜನರಿಗೆ ಬಿಗ್ ಶಾಕ್ ಕೊಟ್ಟಿದೆ. ಬಸ್ ಪ್ರಯಾಣ ದರವನ್ನು ಶೇ.12ರಷ್ಟು ಏರಿಕೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೊರತು ಪಡಿಸಿ, ಕೆಎಸ್ ಆರ್ ಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣ ಮಾಡುವವರಿಗೆ ನೂತನ ದರ ಅನ್ವಯವಾಗಿದೆ.

ಕಳೆದ ನಾಲ್ಕು ವರ್ಷಗಳ ಬಳಿಕ ರಾಜ್ಯ ಸರಕಾರ ಇದೇ ಮೊದಲ ಬಾರಿಗೆ ಬಸ್ ಪ್ರಯಾಣದ ದರ ಏರಿಕೆ ಮಾಡಿದೆ. ಇಂದು (ಮಂಗಳವಾರ) ಮಧ್ಯರಾತ್ರಿಯಿಂದಲೇ ಈ ನೂತನ ದರ ಅನ್ವಯವಾಗಲಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ.