ಪಾಟ್ನಾ : Lalu Prasad Yadav : ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಭಾನುವಾರ ಪಾಟ್ನಾದಲ್ಲಿರುವ ತಮ್ಮ ಪತ್ನಿ ರಾಬ್ರಿ ದೇವಿ ನಿವಾಸದಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು ಏಟು ಮಾಡಿಕೊಂಡಿದ್ದಾರೆ. ವರದಿಗಳ ಪ್ರಕಾರ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಆಯತಪ್ಪಿ ಬಿದ್ದ ಪರಿಣಾಮ ಅವರ ಭುಜ ಹಾಗೂ ಬೆನ್ನಿಗೆ ಪೆಟ್ಟು ಬಿದ್ದಿದೆ ಎಂದು ತಿಳಿದು ಬಂದಿದೆ. ಬಿದ್ದ ರಭಸಕ್ಕೆ ಲಾಲು ಪ್ರಸಾದ್ ಯಾದವ್ ಬಲ ಭುಜ ಮುರಿದಿದೆ ಎನ್ನಲಾಗಿದೆ.
ಲಾಲು ಯಾದವ್ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗದೆ ಕೆಳಗೆ ಬಿದ್ದು ಬಲ ಭುಜ ಮತ್ತು ಬೆನ್ನಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಲಾಲು ಪ್ರಸಾದ್ ಯಾದವ್ ಕಿಡ್ನಿ ಸಂಬಂಧಿ ಚಿಕಿತ್ಸೆಗೆಂದು ವಿದೇಶಕ್ಕೆ ಕರೆದುಕೊಂಡು ಹೋಗಬೇಕು ಎಂದುಕೊಂಡಿರುವಾಗಲೇ ಈ ಅವಘಡ ಸಂಭವಿಸಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವೈದ್ಯರು ಲಾಲು ಪ್ರಸಾಸ್ ಯಾದವ್ರನ್ನು ವಿವಿಧ ಪರೀಕ್ಷೆಗಳಿಗೆ ಒಳಪಡಿಸಿದ್ದು ಇದರಲ್ಲಿ ಅವರ ಬಲ ಭುಜ ಮುರಿತಗೊಂಡಿದೆ ಎಂದು ತಿಳಿದುಬಂದಿದೆ. ಪೆಟ್ಟಾದ ಜಾಗದ ಸುತ್ತ ಕ್ರೇಪ್ ಬ್ಯಾಂಡೇಜ್ ಹಾಕಲಾಗಿದೆ. ಹಾಗೂ ಔಷಧಿಗಳನ್ನು ನೀಡಿ ಅವರನ್ನು ಮನೆಗೆ ಕಳಿಸಲಾಗಿದೆ ಎಂದು ಲಾಲು ಪ್ರಸಾದ್ ಯಾದವ್ ಆಪ್ತ ಮೂಲಗಳು ತಿಳಿಸಿವೆ. ಭುಜ ಹಾಗೂ ಬೆನ್ನಿಗೆ ಏಟು ಬಿದ್ದಿರುವುದನ್ನು ಹೊರತುಪಡಿಸಿ ಲಾಲು ಪ್ರಸಾದ್ ಯಾದವ್ಗೆ ಇನ್ಯಾವುದೇ ಸಮಸ್ಯೆ ಉಂಟಾಗಿಲ್ಲ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ರ ಆಪ್ತ ಮೂಲಗಳು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿವೆ.
ಮೇವು ಹಗರಣದಲ್ಲಿ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಕಳೆದ ಹಲವು ವರ್ಷಗಳಿಂದ ಶಿಕ್ಷೆಯನ್ನು ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ ಕಳೆದ ಒಂದೆರಡು ತಿಂಗಳಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಇದನ್ನು ಓದಿ : MLA Basana Gowda Patil Yatnal : ಮಂತ್ರಿ ಸ್ಥಾನಕ್ಕೆ ಕ್ಷೇತ್ರ ಬಿಟ್ಟು ವರಿಷ್ಠರ ಮನೆ ಅಲೆಯಬೇಕು : ಬಸನಗೌಡ ಪಾಟೀಲ್ ಯತ್ನಾಳ್
ಇದನ್ನೂ ಓದಿ : ದೆಹಲಿಯ ಗುರುದ್ವಾರದಲ್ಲಿ ಮಲಗುತ್ತಿದ್ದ ಹುಡುಗ.. ಈಗ ಕ್ರಿಕೆಟ್ ಜಗತ್ತಿನ ಟಾಕ್ ಆಫ್ ದಿ ಟೌನ್ !
Lalu Prasad Yadav Falls From Stairs in Patna, Suffers Fracture in Right Shoulder