Lucknow Rains : ಲಕ್ನೋದಲ್ಲಿ ಬಾರೀ ಮಳೆ : ಗೋಡೆ ಕುಸಿದು 9 ಮಂದಿ ಸಾವು, ಶಾಲೆಗಳಿಗೆ ರಜೆ ಘೋಷಣೆ

ಲಕ್ನೋ : (Lucknow Rains) ಬಾರೀ ಮಳೆಯ ಹಿನ್ನೆಲೆಯಲ್ಲಿ ಸೇನೆಯ ಎನ್‌ಕ್ಲೇವ್‌ (Army Enclave Collapse) ಗೋಡೆ ಕುಸಿದು ಒಂಬತ್ತು ಮಂದಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ ಕಂಟೋನ್ಮೆಂಟ್‌ ಪ್ರದೇಶದಲ್ಲಿನ ದಿಲ್ಕುಶಾ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಾಗಿದೆ. ಇನ್ನು ಬಾರೀ ಮಳೆಯಿಂದಾಗಿ ಶಾಲೆಗಳು, ಜಲಾವೃತವಾಗಿದ್ದು, ಶಾಲೆಗಳಿಗೆ ರಜೆ ಘೋಷಣೆ (School Holiday Declared) ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಮೃತಪಟ್ಟ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್‌ ಸಂತಾಪ ಸೂಚಿಸಿದ್ದು, ಪರಿಹಾರ ಘೋಷಣೆ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಲಕ್ನೋದ ಕಂಟೋನ್ಮೆಂಟ್‌ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಒಂಬತ್ತು ಮಂಡಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಗೋಡೆಯ ಕೆಳಗೆ ಸಿಲುಕಿರುವವರ ರಕ್ಷಣಾ ಕಾರ್ಯವನ್ನು ಮುಂದುವರಿಸಲಾಗಿದೆ. ಕೆಲವು ಕಾರ್ಮಿಕರು ದಿಲ್ಕುಶಾ ಪ್ರದೇಶದಲ್ಲಿನ ಆರ್ಮಿ ಎನ್‌ಕ್ಲೇವ್‌ನ ಹೊರಗಡೆ ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದರು. ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಸೇನಾ ಆವರಣದ ಗಡಿ ಗೋಡೆ ಕುಸಿದಿದೆ ಎಂದು ಜಂಟಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಪಿಯೂಷ್ ಮೊರ್ಡಿಯಾ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.

ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಂತಾಪ ಸೂಚಿಸಿದ್ದು, ಮೃತರ ಕುಟೂಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಸೂರ್ಯಪಾಲ್‌ ಗಂಗ್ವಾರ್‌ ಅವರು ಭೇಟಿ ನೀಡಿದ್ದು, ಪರಿಹಾರ ಕಾರ್ಯಾಚರಣೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ನಗರದ ಹಲವೆಡೆ ಕೃತಕ ನೆರೆಯ ಹಾವಳಿ ಉಂಟಾಗಿದ್ದು, ಶಾಲೆಗಳು ಜಲಾವೃತವಾಗಿದೆ. ಮಕ್ಕಳ ಸುರಕ್ಷತೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 16 ರಂದು ಲಕ್ನೋ ನಗರದ ಶಾಲೆಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇಂದು 12ನೇ ತರಗತಿ ವರೆಗಿನ ತರಗತಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರೀ ಮಳೆಯಿಂದಾಗಿ ಲಕ್ನೋದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ತಗ್ಗು ಪ್ರದೇಶದಲ್ಲಿರುವ ಹಲವು ಮನೆಗಳು ಜಲಾವೃತವಾಗಿದ್ದು, ಉತ್ತರ ಪ್ರದೇಶದ ಝಾನ್ಸಿ, ಜರೈ, ಲಕ್ನೋ, ಕಾನ್ಪುರ ಮತ್ತು ಬಹ್ರೈಚ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿರುವ ಕುರಿತು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

ಇದನ್ನೂ ಓದಿ : Karnataka Dasara Holidays 2022 : ಸೆಪ್ಟೆಂಬರ್‌ 26 ರಿಂದ ದಸರಾ ರಜೆ ಘೋಷಣೆ : ಸಚಿವರಿಂದ ಮಹತ್ವದ ಆದೇಶ

ಇದನ್ನೂ ಓದಿ : Prime minister birthday: ಪ್ರಧಾನಿ ಹುಟ್ಟುಹಬ್ಬದಂದು ವಿಮಾನದ ಮೂಲಕ ಭಾರತಕ್ಕೆ ಬರಲಿವೆ ಎಂಟು ವಿಶೇಷ ಚಿರತೆ

Lucknow Rains 9 dead Army Enclave Collapse School Holiday Declared

Comments are closed.