ಮುಂಬೈ: ಕೊರೊನಾ ವೈರಸ್ ಸೋಂಕು ಮಹಾರಾಷ್ಟ್ರದಲ್ಲಿ ಮರಣ ಮೃದಂಗವನ್ನು ಬಾರಿಸುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 920 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಹೆಮ್ಮಾರಿ ಸಾವಿನಲ್ಲೂ ದಾಖಲೆಯನ್ನು ಬರೆಯುತ್ತಿದೆ.
ಮಹಾರಾಷ್ಟ್ರದಲ್ಲಿ ಬುಧವಾರ 57,640 ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 48,80, 542 ಕ್ಕೆ ತಲುಪಿದೆ, ಒಂದೆಡೆ ಕೊರೊನಾ ಸೋಂಕು ಹೆಚ್ಚುತ್ತಿದ್ರೆ, ಇನ್ನೊಂದೆಡೆಯಲ್ಲಿ ಕೊರೊನಾದಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಒಂದೆ ದಿನ 920 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಸೋಂಕಿತರ ಸಂಖ್ಯೆ 72,662 ಕ್ಕೆ ತಲುಪಿದೆ.
ಮಹಾರಾಷ್ಟ್ರದಲ್ಲಿ ಒಟ್ಟು 6,41,596 ಸಕ್ರಿಯ ಪ್ರಕರಣಗಳಿವೆ. ಇನ್ನು ಮುಂಬೈನಲ್ಲಿ 24 ಗಂಟೆಗಳ ಅವಧಿಯಲ್ಲಿ 3,882 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, 77 ಮಂದಿ ಸಾವನ್ನಪ್ಪಿದ್ದಾರೆ. ಮಹಾನಗರದಲ್ಲಿನ ಕೋವಿಡ್ -19 ಸೋಂಕಿತರ ಸಂಖ್ಯೆ 6,65,299ಕ್ಕೆ ಏರಿಕೆ ಯಾಗಿದ್ದು, 51,472 ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಮಹಾರಾಷ್ಟ್ರದಲ್ಲಿ ಎಪ್ರಿಲ್ 14ರಿಂದಲೇ ಲಾಖ್ ಡೌನ್ ಜಾರಿ ಮಾಡಲಾಗಿದ್ದು, ಮೇ 15 ವರೆಗೂ ಕಟ್ಟುನಿಟ್ಟಿನ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆ.
