15 ದಿನಗಳ ಕಾಲ ಜನತಾ ಕರ್ಪ್ಯೂ : ಮಹಾರಾಷ್ಟ್ರದಲ್ಲಿ ಅಗತ್ಯ‌ ವಸ್ತು‌ ಖರೀದಿಗೂ ಬೇಕು ಅನುಮತಿ

ಮುಂಬೈ: ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ15 ದಿನಗಳ ಕಾಲ ಜನತಾ ಕರ್ಫ್ಯೂವನ್ನು ಜಾರಿ ಮಾಡಿ ಸಿಎಂ ಉದ್ದವ್ ಠಾಕ್ರೆ ಆದೇಶಿಸಿದ್ದಾರೆ.

ಏಪ್ರಿಲ್ 30ರವರೆಗೆ ಜನತಾ ಕರ್ಫ್ಯೂ ಜಾರಿಯಲ್ಲಿರಲಿದ್ದು, ರಾತ್ರಿ 8 ಗಂಟೆಯಿಂದ ಕರ್ಪ್ಯೂ ಜಾರಿಗೆ ಬರಲಿದೆ. ರಾಜ್ಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಅಗತ್ಯ ವಸ್ತುಗಳನ್ನು ಖರೀದಿಸಲು ಮಾತ್ರ ಮನೆಯಿಂದ ಹೊರಗಡೆ ಬರಬರಲು ಅನುಮತಿ ನೀಡಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ 4 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ತುರ್ತು ಸಂದರ್ಭ ಹೊರತು ಪಡಿಸಿ ಅನಗತ್ಯ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿದೆ. ಅಗತ್ಯ ವಸ್ತುಗಳ ಅಂಗಡಿ, ಮೆಡಿಕಲ್, ಬ್ಯಾಂಕು, ಮಾಧ್ಯಮ ಸೇವೆಗಳಿಗೆ ಮಾತ್ರವೇ ಅನುಮತಿ ನೀಡಲಾಗಿದ್ದು, ಬೆಳಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಮಾತ್ರವೇ ಅಗತ್ಯ ಸೇವೆಗಳು ದೊರೆಯಲಿದ್ದು, ಆನ್ ಲೈನ್ ಡೆಲಿವರಿ ಸೇವೆ ಹಾಗೂ ಸ್ಥಳೀಯ ರೈಲು ಮತ್ತು ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

Comments are closed.