ಮುಂಬೈ : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರಕಾರ ಎಚ್ಚೆತ್ತುಕೊಂಡಿದ್ದು, ಕರ್ನಾಟಕದ ಗಡಿ ಜಿಲ್ಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿದೆ.
ಮಹಾರಾಷ್ಟ್ರದಲ್ಲಿ ಕಠಿಣ ಲಾಕ್ ಡೌನ್ ಜಾರಿಯ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕೊಂಚ ಕಡಿಮೆಯಾಗಿದೆ. ಆದರೆ ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿದೆ.
ಕರ್ನಾಟಕದ ಗಡಿ ಜಿಲ್ಲೆಗಳಾದ ಕೊಲ್ಲಾಪುರ, ಸಾಂಗ್ಲಿ ಹಾಗೂ ಸತಾರಾ ಜಿಲ್ಲೆಗಳನ್ನು 10 ದಿನಗಳ ಕಾಲ ಸಂಪೂರ್ಣವಾಗಿ ಲಾಕ್ ಮಾಡಲಾಗಿದೆ. ಇದರಿಂದಾಗಿ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಸಂಚಾರ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
