ಎಪ್ರಿಲ್ 1 ರಿಂದ 15 ದಿನ ಲಾಕ್ ಡೌನ್ ಸಾಧ್ಯತೆ..!! ಎಲ್ಲದಕ್ಕೂ ರೆಡಿಯಾಗಿ ಅಂದ್ರು ಸಿಎಂ

ಮುಂಬೈ: ಕೊರೊನಾ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಆತಂಕವನ್ನು ತಂದೊಡ್ಡಿದೆ. ಕೊರೊನಾ ಹೆಮ್ಮಾರಿ ನಿಯಂತ್ರಣವನ್ನೂ ಮೀರಿ ಆರ್ಭಟಿಸುತ್ತಿದ್ದು, 15 ದಿನಗಳ ಕಾಲ ಲಾಕ್ ಡೌನ್ ಹೇರಿಕೆಗೆ ಮಹಾರಾಷ್ಟ್ರ ಸರಕಾರ ಚಿಂತನೆ ನಡೆಸಿದೆ. ಅಲ್ಲದೇ ಸಿಎಂ ಕೂಡ ಲಾಕ್ ಡೌನ್ ಗೆ ಸಿದ್ದರಾಗಿ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ 25 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ನಿತ್ಯವೂ ದಾಖಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ಕೊರೊನಾ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಕೊರೊನಾ ಸೋಂಕು ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ.

ಕೊರೊನಾ ಎರಡನೇ ಅಲೆಯ ಆರ್ಭಟಕ್ಕೆ ಪರಿಸ್ಥಿತಿ ಕೈ ಮೀರಿ ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕೊವಿಡ್ -19 ಸಮಿತಿಯ ಶಿಫಾರಸಿನ ಮೇರೆಗೆ ಮುಂದಿನ ಕೆಲವು ದಿನಗಳಲ್ಲಿ ಎರಡನೇ ಸಂಪೂರ್ಣ ಲಾಕ್ಡೌನ್ ವಿಧಿಸಲು ರಾಜ್ಯ ಸರ್ಕಾರ ಚಿಂತಿಸುತ್ತಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಪ್ರಮಾಣಿತ ಕಾರ್ಯಾಚರಣಾ ಕಾರ್ಯ ವಿಧಾನಗಳನ್ನು (ಎಸ್ಒಪಿ) ಸಿದ್ಧಪಡಿಸುವಂತೆ ಕೇಳಿಕೊಂಡಿದ್ದಾರೆ. ಅಲ್ಲದೇ ಲಾಕ್ ಡೌನ್ ಹೇರಿಕೆ ಮಾಡಬಹುದು ಎಂದು ಸೂಚನೆಯನ್ನು ನೀಡಿದ್ದಾರೆ.

https://kannada.newsnext.live/corona-virus-second-waves-karnatka/

ಲಾಕ್ ಡೌನ್ ಹೇರಿಕೆಯಾದ್ರೆ, ಆಹಾರ ಧಾನ್ಯಗಳು, ಔಷಧಿ ಸರಬರಾಜು ಹಾಗೂ ಅಗತ್ಯ ವಸ್ತುಗಳ ಸರಬರಾಜು ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಾಂಕ್ರಾಮಿಕ ಸಮಯದಲ್ಲಿ ಆರ್ಥಿಕತೆಯನ್ನು ತೇಲುವಂತೆ ಮಾಡಲು ಸರ್ಕಾರವು ತನ್ನ ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದ್ದರೂ ಸಹ, ಜನರ ಆರೋಗ್ಯವನ್ನು ಕಾಪಾಡುವುದು ತನ್ನ ಆದ್ಯತೆಯಾಗಿದೆ ಎಂದು ಠಾಕ್ರೆ ಹೇಳಿದರು.

https://kannada.newsnext.live/cd-case-lady-letter-highcourt-chief-justice/

ಲಾಕ್ ಡೌನ್ ಹೇರಿಕೆಯ ಕುರಿತು ಯಾವುದೇ ಗೊಂದಲಗಳಿಲ್ಲ. ಹಣಕಾಸಿನ ಸ್ಥಿತಿಗತಿಯ ಮೇಲೆ ಬೀರ ಬಹುದಾದ ಪರಿಣಾಮಗಳ ಕುರಿತು ಅವಲೋಕನ ನಡೆಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ತಿಳಿಸಿದ್ದಾರೆ.

https://kannada.newsnext.live/corona-virus-hike-karnataka-lockdown-cm-meeting/

Comments are closed.