ಥಾಣೆ : ಅಪ್ರಾಪ್ತ 6 ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 42 ವರ್ಷದ ಕಾಮುಕನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರದಲ್ಲಿ ವಾಸವಾಗಿದ್ದ ಬಾಲಕಿ ಆಟವಾಡುತ್ತಿದ್ದಳು. ಈ ವೇಳೆಯಲ್ಲಿ ಬಾಲಕಿಯ ನೆರೆ ಮನೆಯಲ್ಲಿ ವಾಸವಿದ್ದ ಆರೋಪಿ ಬಾಲಕಿಯನ್ನು ಆಟವಾಡುವ ನೆಪದಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವನ್ನು ಎಸಗುತ್ತಿದ್ದ. ಆದರೆ ಬಾಲಕಿ ಈ ವಿಚಾರವನ್ನು ಇತ್ತೀಚಿಗಷ್ಟೇ ಮನೆಯವರ ಬಳಿಯಲ್ಲಿ ಹೇಳಿಕೊಂಡಿದ್ದಾಳೆ.
ಈ ಕುರಿತು ಥಾಣೆಯ ಹಿಲ್‌ಲೇನ್ ಪೊಲೀಸ್ ಠಾಣೆಗೆ ಬಾಲಕಿಯ ಪೋಷಕರು ದೂರು ನೀಡಿದ್ದರು. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅತ್ಯಾಚಾರ ನಡೆದಿರು ವುದು ಬೆಳಕಿಗೆ ಬಂದಿದೆ. ಇದೀಗ ಪೋಸ್ಕೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು,42 ವರ್ಷದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ : ಮೈಸೂರು ಗ್ಯಾಂಗ್‌ರೇಪ್ ಬೆನ್ನಲ್ಲೇ ಮತ್ತೊಂದು ಕೃತ್ಯ : ಮಹಿಳೆಯ ಬೆತ್ತಲೆಗೊಳಿಸಿ ಅಂಗಾಂಗ ಮುಟ್ಟಿ ವಿಕೃತಿ ಮೆರೆದ ದುರುಳರು
ಇದನ್ನೂ ಓದಿ : ಡಿಬಾಸ್ ಫಾರಂ ಹೌಸ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ನ್ಯಾಯಾಂಗ ಬಂಧನಕ್ಕೆ
(6 years old girl raped 42 years old Arrest in Thane Maharashtra )