Mallikarjun Kharge : ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣಾ ಅಖಾಡಕ್ಕೆ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : Mallikarjun Kharge  ರಾಜಸ್ಥಾನ ಕಾಂಗ್ರೆಸ್ ನಲ್ಲಿ ನಡೆದ ಕ್ಷಿಪ್ರಕ್ರಾಂತಿಯ ಬೆನ್ನಲ್ಲೆ, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಖಾಡದಲ್ಲೂ ಮಹತ್ವದ ತಿರುವು ಸಿಕ್ಕಿದೆ. ಕೊನೇ ಘಳಿಗೆಯಲ್ಲಿ ಅಧ್ಯಕ್ಷೀಯ ಚುನಾವಣೆಗೆ ರಾಜ್ಯ ಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸ್ಪರ್ಧೆಯೂ ಬಹುತೇಕ ಖಚಿತವಾಗಿದೆ.

ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಕೇರಳದ ಸಂಸದ ಶಶಿ ತರೂರ್ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಾರೆ ಅಂತಾ ಅಂದುಕೊಳ್ಳಲಾಗಿತ್ತು. ಆದ್ರೆ, ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ಅವರಿಂದಾಗಿ ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಮೂಡಿತ್ತು. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಗೆಹ್ಲೊಟ್ ಸ್ಪರ್ಧೆ ಮಾಡ್ತಾರೆ ಅಂತಾ ಗೊತ್ತಾಗುತ್ತಿದ್ದಂತೆ ರಾಜಸ್ಥಾನದ ಸಿಎಂ ಆಗಿ ಸಚಿನ್ ಪೈಲೆಟ್ ಆಯ್ಕೆ ಆಗ್ತಾರೆ ಅನ್ನೋ ಕಾರಣಕ್ಕೆ, ಗೆಹ್ಲೋಟ್ ಬೆಂಬಲಿಗರು ಬಂಡಾಯವೆದ್ದಿದ್ರು. 90ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ಕೊಡೋ ಹಂತಕ್ಕೂ ಹೋಗಿದ್ರು. ಗುರುವಾರ ಸೋನಿಯಾ ಗಾಂಧಿ ಅವರನ್ನ ಭೇಟಿ ಮಾಡಿರೋ ಅಶೋಕ್ ಗೆಹ್ಲೋಟ್ ತಮ್ಮ ಬೆಂಬಲಿಗರ ಬಂಡಾಯಕ್ಕೆ ಕ್ಷಮೆ ಕೋರಿದ್ದಾರೆ. ಅಲ್ದೆ ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸೋದಿಲ್ಲ ಅಂತಾ ತಿಳಿಸಿದ್ದಾರೆ. ಅಲ್ದೆ ರಾಜಸ್ಥಾನದ ಸಿಎಂ ಆಗಿ ಯಾರಾಗಿರಬೇಕೆಂದು ಸೋನಿಯಾ ಅವರೇ ನಿರ್ಧರಿಸುತ್ತಾರೆ ಅಂತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದ್ರ ಬೆನ್ನಲ್ಲೆ ದಿಗ್ವಿಜಯ್ ಸಿಂಗ್ ಅವರೂ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಅಂತಾ ಗೊತ್ತಾಗಿತ್ತು.

ದಿಢೀರ್ ಬೆಳವಣಿಗೆಯಲ್ಲಿ ಖರ್ಗೆ ಹೆಸರು: ಅಶೋಕ್ ಗೆಹ್ಲೋಟ್ ಸ್ಪರ್ಧೆ ಮಾಡೋಲ್ಲ ಅನ್ನೋದು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಖಾಡದಲ್ಲಿ ಶಶಿ ತರೂರ್ ಒಬ್ಬರೇ ಉಳಿದುಕೊಂಡಿದ್ರು. ಆದ್ರೆ ಮಹತ್ವದ ಬೆಳವಣಿಗೆಯೊಂದರಲ್ಲಿ ಏಕಾಏಕಿ ಮಲ್ಲಿಕಾರ್ಜುನ ಖರ್ಗೆ ಹೆಸರು ಸ್ಪರ್ಧೆಗೆ ಕೇಳಿ ಬಂದಿದೆ. ಮೂಲಗಳ ಪ್ರಕಾರ ಹೈಕಮಾಂಡ್ ಅಂದ್ರೆ ಸೋನಿಯಾ ಗಾಂಧಿ ಅವರೇ ಮಲ್ಲಿಕಾರ್ಜುನ ಖರ್ಗೆ ಅವರನ್ನ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ  ಸ್ಪರ್ಧಿಸುವಂತೆ ಸಲಹೆ ನೀಡಿರೋದಾಗಿ ಗೊತ್ತಾಗಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸೋದು ಬಹುತೇಕ ಖಚಿತ ಅಂತಾ ಹೇಳಲಾಗುತ್ತಿದೆ. ಖರ್ಗೆ ಚುನಾವಣೆಗೆ ಸ್ಪರ್ಧಿಸಿದ್ರೆ ಕಾಂಗ್ರೆಸ್ ಪಕ್ಷದ ಒಬ್ಬರಿಗೆ ಒಂದೇ ಹುದ್ದೆ ಅನ್ನೋ ನಿಯಮದ ಪ್ರಕಾರ ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿ ಬರಬಹುದು. ಇದೀಗ ಅಧ್ಯಕ್ಷೀಯ ಚುನಾವಣೆಗೆ ದಿಗ್ವಿಜಯ ಸಿಂಗ್, ಶಶಿ ತರೂರ್, ಮತ್ತು ಮಲ್ಲಿಕಾರ್ಜು ಖರ್ಗೆ ನಡುವೆ ಸ್ಪರ್ಧೆ ನಡೆಯಲಿದೆ.

ಇಂದು ಶಶಿ ತರೂರ್ ನಾಮಪತ್ರ : ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲಿರುವ ಸಂಸದ ಶಶಿ ತರೂರ್ ಇಂದು ನಾಮ ಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ದೆಹಲಿಯಲ್ಲಿರೋ ತರೂರ್ ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ತರೂರ್ ನಾಮಪತ್ರ ಸಲ್ಲಿಸಲಿದ್ದಾರೆ. ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ನಡೆಲಿದ್ದು ಅಕ್ಟೋಬರ್ 19 ರಂದು ಫಲಿತಾಂಶ ಬಲಿದೆ. 20 ವರ್ಷದ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು. ಗಾಂಧಿ ಕುಟುಂಬದ ಯಾರೂ ಚುನಾವಣೆಗೆ ಸ್ಪರ್ಧಿಸದೇ ಇರೋದು ಮತ್ತೊಂದು ಕುತೂಹಲಕಾರಿ ಸಂಗತಿಯಾಗಿದೆ. ಅಲ್ದೆ ಈ ಬಾರಿ ಗಾಂಧಿ ಕುಟುಂಬೇತರ ಸದಸ್ಯರು ಕಾಂಗ್ರೆಸ್ ಅಧ್ಯಕ್ಷರಾಗೋದು ಖಚಿತವಾಗಿದೆ. ಆದ್ರೆ ಆಡಳಿತ ಹಿಡಿತ ಗಾಂಧಿ ಕುಟಂಬದ ಕೈಯಲ್ಲೇ ಇರುತ್ತಾ. ಅಥವಾ ಬದಲಾಗುತ್ತಾ ಕಾದು ನೋಡಬೇಕಿದೆ.

ಇದನ್ನೂ ಓದಿ : Rahul entry Karnataka : ಕರ್ನಾಟಕ ಪ್ರವೇಶಿಸಿದ ರಾಹುಲ್ ಜೋಡೋ ಯಾತ್ರೆ

mallikarjun kharge will file his nomination for the partys presidential-elections today

Comments are closed.