Mantralaya Open: ರಾಯರ ಬೃಂದಾವನ ದರ್ಶನಕ್ಕೆ ಭಕ್ತರಿಗೆ ಅವಕಾಶ

ರಾಯಚೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನ ದರ್ಶನ ಪಡೆಯಲು ಭಕ್ತರಿಗೆ ಶ್ರೀಮಠದ ಆಡಳಿತ ಮಂಡಳಿ ಅವಕಾಶ ಕಲ್ಪಿಸಿದೆ.

ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ರಾಯರ ಮೂಲ ಬೃಂದಾವನದ ದರ್ಶನವನ್ನು  ಪಡೆಯಬಹುದಾಗಿದೆ. ಬೆಳಗ್ಗೆ 6 ರಿಂದ ಅಪರಾಹ್ನ 2ರ ವರೆಗೆ ಮತ್ತು ಸಂಜೆ 4ರಿಂದ ರಾತ್ರಿ 9ರ ವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೆ ಮಠದ ಪ್ರಾಕಾರದಲ್ಲಿ ಪ್ರದಕ್ಷಿಣೆಗೆ ಅವಕಾಶವಿಲ್ಲ.

ಆಂಧ್ರಪ್ರದೇಶ ಸರಕಾರ ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆ ಯಲ್ಲಿ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಯ ಅನ್ವಯ, ಹೊರ ಊರುಗಳಿಂದ ಬರುವ ಭಕ್ತರಿಗೆ ಮಠದ ವಸತಿಗೃಹ ಗಳಲ್ಲಿ ವಾಸ್ತವ್ಯಕ್ಕೆಅವಕಾಶ ಕಲ್ಪಿಸಲಾಗಿದೆ.

ಆದರೆ ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಪಾಲನೆ ಹಾಗೂ ಮಾಸ್ಕ್  ಕಡ್ಡಾಯಗೊಳಿಸಲಾಗಿದೆ ಎಂದು ಮಂತ್ರಾಲಯದ ರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ತಿಳಿಸಿದ್ದಾರೆ.

Comments are closed.