Dhanbad Fire Accident : ಬಹುಮಹಡಿ ಕಟ್ಟಡದಲ್ಲಿ ಅಗ್ನಿದುರಂತ : ಮಕ್ಕಳು ಸೇರಿ 14 ಮಂದಿ ಸಾವು

ರಾಂಚಿ : ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ (Dhanbad Fire Accident) ಸಂಭವಿಸಿ ಮಕ್ಕಳು, ಮಹಿಳೆಯರು ಸೇರಿದಂತೆ ಒಟ್ಟು 14 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಜಾರ್ಖಂಡ್ ನ ಧನ್‌ಬಾದ್‌ನ ಜೋರಾಫಟಕ್ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಧನ್‌ಬಾದ್‌ನ ಆಶೀರ್ವಾದ್ ಟವರ್ ಅಪಾರ್ಟ್‌ಮೆಂಟ್‌ನ 13 ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಒಟ್ಟು 10 ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ ಒಟ್ಟು 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಗುರುತಿಸಲಾಗಿದೆ. ಅಲ್ಲದೇ 11 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಒಟ್ಟು 40ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳನ್ನು ಕರೆಯಿಸಿಕೊಂಡು, ಬೆಂಕಿನಂದಿಸುವ ಕಾರ್ಯವನ್ನು ನಡೆಸಲಾಗುತ್ತಿದೆ.

ಇನ್ನು ಅಪಾರ್ಟ್‌ಮೆಂಟ್‌ ಇನ್ನಷ್ಟು ಮಂದಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿವೆ. ಕಟ್ಟಡದ ಆರನೇ ಮತ್ತು ಏಳನೇ ಮಹಡಿಯಲ್ಲಿ ಸಿಲುಕಿರುವ ನಿವಾಸಿಗಳನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಜಿಲ್ಲಾಡಳಿತ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಕಾರ್ಯಾಚರಣೆಯನ್ನು ನಡೆಸಯತ್ತಿದೆ. ಅಲ್ಲದೇ ಜಿಲ್ಲಾಧಿಕಾರಿಗಳು ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿರುವವರ ಕುರಿತು ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಅಲ್ಲದೇ ಘಟನೆಗೆ ಕಾರಣವೇನು ಅನ್ನುವ ಕುರಿತು ತನಿಖೆಯನ್ನು ನಡೆಸಲಾಗುತ್ತಿದೆ.

ಮೃತರ ಕುಟುಂಬಕ್ಕೆ ತಲಾ 2 ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಧನ್ ಬಾದ್ ನಲ್ಲಿ ಸಂಭವಿಸಿರುವ ಅಗ್ನಿ ದುರಂತದ ವಿಷಯ ಕೇಳಿ ತೀವ್ರ ದುಃಖವಾಗಿದೆ. ದುರಂತ ದಲ್ಲಿ ಗಾಯಗೊಂಡವರು ಶೀಘ್ರದಲ್ಲಿಯೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ : Lorry driver death: ಅನುಮಾನಸ್ಪದ ರೀತಿಯಲ್ಲಿ ಲಾರಿ ಚಾಲಕ ಸಾವು: ಇನ್ನೋರ್ವ ಚಾಲಕನೇ ಕೊಲೆ ಮಾಡಿರುವ ಶಂಕೆ

ಇದನ್ನೂ ಓದಿ : ಮಂಗಳೂರು: ಅತಿಯಾಗಿ ಮೊಬೈಲ್‌ ಬಳಸುತ್ತಿದ್ದಕ್ಕೆ ಬೈದ ತಾಯಿ: ಮನನೊಂದು ನೇಣಿಗೆ ಶರಣಾದ ಬಾಲಕ

Massive fire accident in Dhanbad building: 15 dead PM Modi announces Rs 2 lakh compensation

Comments are closed.