ದೆಹಲಿ : ಅನಾರೋಗ್ಯದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ನಿಶಾಂಕ್ ಅವರು, ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದ ನಂತರದಲ್ಲಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಮಂಗಳವಾರ ಏಮ್ಸ್ ಗೆ ದಾಖಲಿಸಲಾಗಿದೆ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಾರವಷ್ಟೇ ಸಚಿವ ರಮೇಶ್ ಪೋಖ್ರಿವಾಲ್ ಅವರು ಕೊರೊನಾ ಸೋಂಕಿನಿಂದ ಗುಣಮಖರಾಗಿದ್ದು, ಮತ್ತೆ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇದೀಗ ಅನಾರೋಗ್ಯಕ್ಕೆ ತುತ್ತಾಗಿರುವ ಕುರಿತು ಏಮ್ಸ್ ವೈದ್ಯರು ತಿಳಿಸಿದ್ದಾರೆ.