ಮಹಾರಾಷ್ಟ್ರ : ನಿಜಕ್ಕೂ ಇದು ಅಮಾನವೀಯ ಘಟನೆ. ಇಡೀ ನಾಗರೀಕ ಸಮಾಜವೇ ತಲೆ ತಗ್ಗಿಸುವ ಕೃತ್ಯವಿದು. ಹೌದು, ಕಳೆದ ಆರು ತಿಂಗಳ ಅವಧಿಯಲ್ಲಿ 16 ವರ್ಷದ ಬಾಲಕಿಯ ಮೇಲೆ 400 ಮಂದಿ (Gang Rape 400 Men ) ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ. ಇನ್ನು ಸಂತ್ರಸ್ತ ಬಾಲಕಿಗೆ ದೂರು ನೀಡಲು ಯತ್ನಿಸಿದಾಗ ಪೊಲೀಸರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಹಾರಾಷ್ಟ್ರದ ಬೀಡ್‌ನಲ್ಲಿ ಅಪ್ರಾಪ್ತ ಬಾಲಕಿ ಎರಡು ವರ್ಷಗಳ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ತಂದೆಯೊಂದಿಗೆ ವಾಸವಾಗಿದ್ದ ಆಕೆಯನ್ನು ಎಂಟು ತಿಂಗಳ ಹಿಂದೆಯಷ್ಟೇ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾದ ನಂತರದಲ್ಲಿ ಪತಿ ಹಾಗೂ ಅತ್ತೆ, ಮಾವ ಕಿರುಕುಳ ಕೊಟ್ಟು ಮನೆಯಿಂದ ಹೊರ ಹಾಕಿದ್ದಾರೆ. ಇದರಿಂದ ಆಕೆ ಓಡಿಹೋಗಿ ಮತ್ತೆ ತಂದೆಯೊಂದಿಗೆ ವಾಸವಾಗಿದ್ದಾಳೆ. ಆದರೆ ತಂದೆ ಆಕೆಯನ್ನು ಮನೆಗೆ ಸೇರಿಸದಿದ್ದಾಗ, ಆಕೆ ಬೀಡ್ ಜಿಲ್ಲೆಯ ಅಂಬಾಜೋಗೈ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆ ನಡೆಸುತ್ತಿದ್ದಳು. ಈ ವೇಳೆಯಲ್ಲಿ ಆಕೆ ಲೈಂಗಿಕ ಶೋಷಣೆಯನ್ನು ಎದುರಿಸಿದ್ದೇನೆ ಎಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಆಕೆ ಈಗ ಎರಡು ತಿಂಗಳ ಗರ್ಭಿಣಿ. ಈ ವಾರ ಆಕೆ ಪೊಲೀಸರಿಗೆ ದೂರು ನೀಡಿದ ನಂತರ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅತ್ಯಾಚಾರ ಮತ್ತು ಕಿರುಕುಳ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ಕುರಿತು ರಾಷ್ಟ್ರೀಯ ಸುದ್ದಿ ಸಂಸ್ಥೆ ಎನ್‌ಐಎ ನೀಡಿರುವ ಮಾಹಿತಿಯ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಬೀಡ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಾಜಾ ರಾಮಸಾಮಿ ತಿಳಿಸಿದ್ದಾರೆ ಎಂದು ಹೇಳಿದೆ.
ಸಂತ್ರಸ್ತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಗೆ ದೂರನ್ನು ನೀಡಿದ್ದಾಳೆ. ತನನ್ನ ಹಲವು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಲು ಹೋದಾಗ ಪೊಲೀಸರು ತನ್ನ ದೂರನ್ನು ಆಲಿಸಿಲ್ಲ. ಅಷ್ಟೇ ಅಲ್ಲದೇ ಓರ್ವ ಪೊಲೀಸ್ ಸಿಬ್ಬಂದಿಯೂ ಕೂಡ ತನ್ನನ್ನ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಇದೀಗ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ : ಮತ್ತೊಮ್ಮೆ ಬಿಜೆಪಿ ಕುಟುಕಿದ ಪದ್ಮಾವತಿ : ಸೋಷಿಯಲ್ ಮೀಡಿಯಾದಲ್ಲಿ ಹಿಂದುತ್ವದ ಪಾಠ
ಇದನ್ನೂ ಓದಿ : ಕಂಗನಾ ಮೇಲೆ ಮುಂದುವರಿದ ಮುನಿಸು: ರಾಷ್ಟ್ರಪತಿಗೆ ಮಹಿಳಾ ಆಯೋಗದ ಪತ್ರ
(minor girl Gang Rape by 400 men Including Police Man in Maharashtra)