Mobile ban in temple: ತಮಿಳುನಾಡಿನ ದೇವಸ್ಥಾನಗಳಲ್ಲಿ ಇನ್ಮುಂದೆ ಮೊಬೈಲ್ ಬಳಸುವಂತಿಲ್ಲ; ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

ಚೆನ್ನೈ: ತಮಿಳುನಾಡಿನಾದ್ಯಂತ ಇರುವ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ (Mobile ban in temple) ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ದೇವಸ್ಥಾನಗಳ ಒಳಗೆ ಶುದ್ಧತೆ ಮತ್ತು ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ನ್ಯಾಯಾಲಯ ಈ ಆದೇಶವನ್ನು ನೀಡಿದೆ.

ತಮಿಳುನಾಡಿನ ತೂತಿಕೋರಿನ್ ಜಿಲ್ಲೆಯ ತಿರುಚೆಂದೂರಿನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದೊಳಗೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರುವಂತೆ ಕೋರಿ ಎಂ.ಸೀತಾರಾಮನ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ದೇವಸ್ಥಾನದೊಳಗೆ ಭಕ್ತರು ದೇವರ ದರ್ಶನ ಮಾಡುವುದನ್ನು ಬಿಟ್ಟು ತಮ್ಮ ಮೊಬೈಲ್ ನಲ್ಲಿ ದೇವರ ಮೂರ್ತಿ ಹಾಗೂ ಪೂಜೆಗಳ ಫೋಟೋ, ವಿಡಿಯೋ ತೆಗೆಯುವುದರಲ್ಲಿ ನಿರತರಾಗಿರುತ್ತಾರೆ ಎಂದು ಅರ್ಜಿದಾರರು ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೇ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರುವಂತೆಯೂ ಅರ್ಜಿ ಮೂಲಕ ಕೋರ್ಟ್ ಗೆ ಮನವಿ ಮಾಡಿದ್ದರು.

ಇದನ್ನೂ ಓದಿ: Employees Provident Fund : ನೌಕರರ ವೇತನ ಮಿತಿ 21000ಕ್ಕೆ ಹೆಚ್ಚಿಸಲು ಕೇಂದ್ರ ನಿರ್ಧಾರ

ಈ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳಾದ ಆರ್. ಮಹದೇವನ್ ಮತ್ತು ಜೆ. ಸತ್ಯನಾರಾಯಣ ಪ್ರಸಾದ್, ಮೊಬೈಲ್ ಗಳು ಭಕ್ತಾದಿಗಳ ಗಮನವನ್ನು ಬೇರೆಡೆಗೆ ತಿರುಗಿಸುತ್ತದೆ. ಭಕ್ತರ ಸುರಕ್ಷತೆಯ ಬಗ್ಗೆ ಎಚ್ಚರವಹಿಸುವುದರ ಜೊತೆಗೆ ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡಲು ಅಧಿಕಾರಿಗಳು ದೇವಸ್ಥಾನಗಳ ಒಳಗೆ ಮೊಬೈಲ್ ಬಳಕೆಗೆ ನಿರ್ಬಂಧ ಹೇರುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಅಲ್ಲದೇ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಯೋಗ್ಯವಾದ ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚಿಸುವಂತೆಯೂ ಕೋರ್ಟ್ ನಿರ್ದೇಶನ ನೀಡಿದೆ.

ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಆಚರಿಸಲು ಹಾಗೂ ಪ್ರಚಾರ ಮಾಡಲು ಅರ್ಹರಾಗಿದ್ದಾರೆ ಎಂಬ ಬಗ್ಗೆ ಯಾವುದೇ ಆಕ್ಷೇಪಗಳಿಲ್ಲ, ಆದರೆ ದೇವಾಲಯದ ಆವರಣದೊಳಗೆ ಕಾರ್ಯನಿರ್ವಹಿಸಲು ಮತ್ತು ಆಚರಣೆಗೆ ಅಂಥ ಸ್ವಾತಂತ್ರ್ಯವು ನಿಯಮಗಳಿಗೆ ಒಳಪಟ್ಟಿರುತ್ತದೆ. ದೇವಸ್ಥಾನ ಗಳಲ್ಲಿ ನಡೆಯುವ ಪೂಜಾ ವಿಧಿ ವಿಧಾನಗಳ ನಿಯಮಾವಳಿಗಳನ್ನು ಸೂಚಿಸಿ ಅಧಿಕಾರಿಗಳು ದೇವಾಲಯದ ಪಾವಿತ್ರ್ಯತೆ ಕಾಪಾಡುವಂತೆ (Mobile ban in temple) ನೋಡಿ ಕೊಳ್ಳಬೇಕು ಎಂದು ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: Pathan Movie : ಒಂದೇ ಸಿನಿಮಾ ಎಂಟು ದೇಶದಲ್ಲಿ ಚಿತ್ರೀಕರಿಸಿದ ಶಾರುಖ್‌ : ಟೀಸರ್‌ ಶ್ರೀಘ್ರದಲ್ಲೇ

Comments are closed.