ಮುಂಬೈ ಗೃಹ ಸಚಿವ ಅನಿಲ್‌‌ ದೇಶಮುಖ್  ರಾಜೀನಾಮೆ

ಮುಂಬೈ: ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಅನಿಲ್ ದೇಶಮುಖ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ.

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಅನಿಲ್ ದೇಶ್ ಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸಿಬಿಐಗೆ ಆದೇಶ ನೀಡಿದೆ.

Comments are closed.