Aryan Khan : ಶಾರೂಖ್‌ ಖಾನ್‌ ಪುತ್ರನಿಗಿಲ್ಲ ಬಿಡುಗಡೆ : ಮತ್ತೆ ಎನ್‌ಸಿಬಿ ಕಸ್ಟಡಿಗೆ ಆರ್ಯನ್‌ ಖಾನ್‌

ಮುಂಬೈ : ಐಶಾರಾಮಿ ಹಡಗಿನಲ್ಲಿ ಡ್ರಗ್ಸ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟ ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ಗೆ ಅಕ್ಟೋಬರ್‌ 7 ರ ವರೆಗೂ ಎನ್‌ಸಿಬಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್‌ ಪಾರ್ಟಿ (Drugs Party) ಯಲ್ಲಿ ಆರ್ಯನ್‌ ಖಾನ್‌ ಭಾಗಿಯಾಗಿದ್ದರು. ಈ ಕುರಿತು ಎನ್‌ಸಿಬಿ ಅಧಿಕಾರಿಗಳು ಪಾರ್ಟಿಯ ಮೇಲೆ ದಾಳಿ ಮಾಡಿ ಆರ್ಯನ್‌ ಖಾನ್‌ ಸೇರಿದಂತೆ ಇತರರನ್ನು ಬಂಧಿಸಿದ್ದರು. ಎನ್‌ಸಿಬಿ ಅಧಿಕಾರಿಗಳು ಮೊನ್ನೆ ನ್ಯಾಯಾಲಯಕ್ಕೆ ಹಾಜರು ಪಡಿಸಿ ಒಂದು ದಿನಗಳ ಕಾಲ ಕಸ್ಟಡಿಗೆ ಪಡೆಯುವಲ್ಲಿ ಸಫಲರಾಗಿದ್ದರು. ಆದ್ರೆ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಮುಂಬೈನ ಕಿಲ್ಲಾ ನ್ಯಾಯಾಲಯ ಎನ್‌ಸಿಬಿ ಹಾಗೂ ಆರ್ಯನ್‌ ಪರ ವಕೀಲರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಆರ್ಯನ್‌ ಖಾನ್‌ನನ್ನು ಎನ್‌ಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಆರ್ಯನ್‌ ಪರ ವಕೀಲರು ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಕಸ್ಟಡಿಗೆ ನೀಡದಂತೆ ವಾದ ಮಂಡಿಸಿದ್ದಾರೆ. ಮಾತ್ರವಲ್ಲ ಆರ್ಯನ್‌ಗೆ ಜಾಮೀನು ನೀಡುವಂತೆಯೂ ನ್ಯಾಯಾಲಯಕ್ಕೆ ಮನವಿಯನ್ನು ಮಾಡಿದ್ದಾರೆ.

ಆದರೆ ಎನ್‌ಸಿಬಿ ಪರ ವಕೀಲರು ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯನ್ನು ಪಡೆದುಕೊಳ್ಳಬೇಕಾಗಿದೆ. ಈ ಕಾರಣಕ್ಕೆ ಇನ್ನೂ ಹಲವು ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಅಂತಿಮವಾಗಿ ನ್ಯಾಯಾಲಯ ಮೂರು ದಿನಗಳ ಕಾಲ ಎನ್‌ಸಿಬಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ಇನ್ನು ಆರ್ಯನ್‌ ಖಾನ್‌ ನ್ಯಾಯಾಲಯಕ್ಕೆ ಹಾಜರಾಗುವ ಹಿನ್ನೆಲೆಯಲ್ಲಿ ತಾಯಿ ಗೌರಿ ಖಾನ್‌ ಕೂಡ ನ್ಯಾಯಾಲಯಕ್ಕೆ ಆಗಮಿಸಿದ್ದರು.

ಆರ್ಯನ್‌ ಖಾನ್‌ ಜೊತೆಗೆ ಬಂಧನಕ್ಕೆ ಒಳಗಾಗಿರುವ ಆರ್ಬಾಜ್‌, ಮುನ್‌ ಮುನ್‌ ಧಮೇಚಾಗೆ ಕೂಡ ಮೂರು ದಿನಗಳ ಕಾಲ ಎನ್‌ಸಿಬಿ ಕಸ್ಟಡಿ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್‌ ಪೋನ್‌ ವಶಕ್ಕೆ ಪಡೆಯಲಾಗಿದೆ ಆದ್ರೂ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ : ಹಡಗಿನಲ್ಲಿ ಡ್ರಗ್ಸ್‌ ಪಾರ್ಟಿ ಆರೋಪ : ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಬಂಧಿಸಿದ ಎನ್‌ಸಿಬಿ

ಇದನ್ನೂ ಓದಿ : ಕ್ರೂಸ್‌ನಲ್ಲಿ ಡ್ರಗ್ಸ್‌ ಪಾರ್ಟಿ : ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಇಂದು ಜಾಮೀನಿಗೆ ಅರ್ಜಿ ಸಲ್ಲಿಕೆ

( Drugs Case Shah Rukh Khan Son Aryan Khan 3 days NCB Custody )

Comments are closed.