Mumbai police saved lives: ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ 25 ವರ್ಷದ ಎಂಜಿನಿಯರ್‌ನ ಜೀವ ಉಳಿಸಿದ ಮುಂಬೈ ಪೊಲೀಸರು

ಮುಂಬೈ: (Mumbai police saved lives) ‘ನೋವು ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ’ ಎಂದು ವ್ಯಕ್ತಿಯೊಬ್ಬರು ಗೂಗಲ್‌ನಲ್ಲಿ ಹುಡುಕುತ್ತಿದ್ದಾರೆ ಎಂದು ಅಮೆರಿಕದ ಕಾನೂನು ಜಾರಿ ಸಂಸ್ಥೆಯಿಂದ ಬಂದ ಎಚ್ಚರಿಕೆಯ ನಂತರ ಮುಂಬೈ ಪೊಲೀಸರು 25 ವರ್ಷದ ವ್ಯಕ್ತಿಯನ್ನು ಪತ್ತೆ ಹಚ್ಚಿ ಆತನ ಜೀವವನ್ನು ಅಂತ್ಯಗೊಳಿಸದಂತೆ ರಕ್ಷಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.

ಜೋಗೇಶ್ವರಿ ಪ್ರದೇಶದ ನಿವಾಸಿ ಹಾಗೂ ಖಾಸಗಿ ಕಂಪನಿಯೊಂದರಲ್ಲಿ ಐಟಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿ, ಶಿಕ್ಷಣ ಮತ್ತು ಇತರೆ ಅಗತ್ಯಗಳಿಗಾಗಿ ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಿದ್ದ. ಗೃಹ ಸಾಲದ ಕಂತುಗಳನ್ನು ಪಾವತಿಸಲು ಸಾಧ್ಯವಾಗದೆ ಖಿನ್ನತೆಗೆ ಒಳಗಾದ ವ್ಯಕ್ತಿ ನೋವು ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ ಎಂದು ಆನ್‌ಲೈನ್‌ನಲ್ಲಿ ಹುಡುಕಲಾರಂಭಿಸಿದ್ದ. ಅಮೇರಿಕಾ ಮೂಲದ ಏಜೆನ್ಸಿ ನವದೆಹಲಿಯ ಇಂಟರ್‌ಪೋಲ್ ಕಚೇರಿಗೆ ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಮುಂಬೈ ಪೊಲೀಸರೊಂದಿಗೆ ಮಾಹಿತಿಯನ್ನು ಹಂಚಿಕೊಂಡಿದೆ.

‘ನೋವು ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ’ಎಂದು ವ್ಯಕ್ತಿಯೊಬ್ಬರು ಗೂಗಲ್‌ನಲ್ಲಿ ಹುಡುಕುತ್ತಿದ್ದಾರೆ ಎಂದು ಅಮೆರಿಕದ ಕಾನೂನು ಜಾರಿ ಸಂಸ್ಥೆಯಿಂದ ಮುಂಬೈ ಪೊಲೀಸರಿಗೆ ಮಾಹಿತಿ ಬಂದಿದ್ದು, ಯುಎಸ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ-ಇಂಟರ್‌ಪೋಲ್ ಹಂಚಿಕೊಂಡಿರುವ ಐಪಿ ವಿಳಾಸ ಮತ್ತು ಸ್ಥಳದಂತಹ ಪ್ರಮುಖ ಮಾಹಿತಿಯ ಆಧಾರದ ಮೇಲೆ ಮಂಗಳವಾರ ಮಧ್ಯಾಹ್ನ ಮುಂಬೈನ ಕುರ್ಲಾ ಪ್ರದೇಶದ ಐಟಿ ಕಂಪನಿಯೊಂದರಲ್ಲಿ ವ್ಯಕ್ತಿಯನ್ನು ಪತ್ತೆಹಚ್ಚಲಾಯಿತು ಅದರಂತೆ,ಮುಂಬೈ ಅಪರಾಧ ವಿಭಾಗದ ಅಧಿಕಾರಿಗಳು ವ್ಯಕ್ತಿಯನ್ನು ಪತ್ತೆಹಚ್ಚಿ ಆತನಿದ್ದ ಸ್ಥಳಕ್ಕೆ ಧಾವಿಸಿದರು.

ನಂತರ ವ್ಯಕ್ತಿಯನ್ನು ಅಪರಾಧ ವಿಭಾಗದ ಕಚೇರಿಗೆ ಕರೆತಂದು ಕೌನ್ಸೆಲಿಂಗ್ ಮಾಡಲಾಗಿತ್ತು. ಕೌನ್ಸೆಲ್ಲಿಂಗ್‌ ವೇಳೆ ಆತ ಈ ಹಿಂದೆಯೂ ಮೂರು-ನಾಲ್ಕು ಬಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಲು ಪ್ರಯತ್ನಿಸಿದ್ದರು ಎಂದು ತಿಳಿದುಬಂದಿದೆ. ಕೌನ್ಸಿಲಿಂಗ್ ನಂತರ, ವ್ಯಕ್ತಿಯನ್ನು ಅವನ ಹೆತ್ತವರೊಂದಿಗೆ ಮನೆಗೆ ಕಳುಹಿಸಲಾಯಿತು ಮತ್ತು ಮಾನಸಿಕ ಚಿಕಿತ್ಸೆಗೆ ಒಳಗಾಗಲು ಸಲಹೆ ನೀಡಲಾಯಿತು ಎಂದು ಅಧಿಕಾರಿಗಳು ಹೇಳಿದರು.

ಇದನ್ನೂ ಓದಿ : Aadhaar Mitra : ಯುಐಡಿಎಐನಿಂದ ಆಧಾರ್ ಮಿತ್ರ ಪ್ರಾರಂಭ : ಆಧಾರ್ ಕಾರ್ಡ್ ಸ್ಥಿತಿ, ದೂರುಗಳನ್ನು ನೋಂದಾಯಿಸುವುದು ಹೇಗೆ ಗೊತ್ತಾ ?

Mumbai Police Saved Lives: Mumbai Police Saved the Life of a 25-Year-Old Engineer Who Was About to Commit Suicide

Comments are closed.