ಬೋಪಾಲ್ : ಕಮಲಾ ನೆಹರೂ (Kamala Nehru) ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಬೆಂಕಿಯ ಕೆನ್ನಾಲಗೆಗೆ ನಾಲ್ಕು ಮಕ್ಕಳು ಸುಟ್ಟು ಕರಕಲಾಗಿರುವ ಘಟನೆ ಮಧ್ಯಪ್ರದೇಶದ ಭೀಪಾಲ್ ನಲ್ಲಿ ನಡೆದಿದೆ.
ಆಸ್ಪತ್ರೆಯಲ್ಲಿನ ಮಕ್ಕಳ ವಾರ್ಡಿನಲ್ಲಿ ಒಮ್ಮಿಂದೊಮ್ಮೆಲೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆಯಲ್ಲಿ ಹಲವು ಮಕ್ಕಳಿಗೆ ಬೆಂಕಿ ತಗುಲಿದೆ. ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವ ಮುನ್ನವೇ ನಾಲ್ಕು ಮಕ್ಕಳು ಬೆಂಕಿನ ಕೆನ್ನಾಲಗೆಗೆ ಸುಟ್ಟು ಕರಕಲಾಗಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಒಟ್ಟು 40 ಮಕ್ಕಳು ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಬೆಳಗ್ಗೆ 9 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ.
ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದು, ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಸೂಚನೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಮೊಹಮ್ಮದ್ ಸುಲೇಮಾನ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಇನ್ನು ಮೃತರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದೆ. ಆದರೆ ಆಸ್ಪತ್ರೆಯಲ್ಲಿ ಒಟ್ಟು ಎಷ್ಟು ಮಕ್ಕಳು ಚಿಕಿತ್ಸೆಯನ್ನು ಪಡೆಯುತ್ತಿದ್ದರು ಅನ್ನೋದು ಇನ್ನೂ ಖಚಿತವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳ ಮಾಹಿತಿಯನ್ನು ಕಲೆ ಹಾಕುವ ಕಾರ್ಯವನ್ನು ಅಧಿಕಾರಿಗಳು ನಡೆಸುತ್ತಿದ್ದಾರೆ.
ಇದನ್ನೂ ಓದಿ : ಕುಡಿದ ಮತ್ತಲ್ಲಿ ಪತ್ನಿಯೊಂದಿಗೆ ಜಗಳ : ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ಕುಡುಕ !
ಇದನ್ನೂ ಓದಿ : ಜೂಜಾಟದಲ್ಲಿ ತೊಡಗಿದ್ದ 8 ಜನರ ಬಂಧನ
(Fire Tragedy in Bhopal Madhya Pradesh Kamala Nehru Children Hospital 4 died)