New Party: ಗುಲಾಂ ನಬಿ ಆಜಾದ್ ಇಂದು ಹೊಸ ರಾಜಕೀಯ ಪಕ್ಷ ಘೋಷಿಸ್ತಾರಾ?

ಶ್ರೀನಗರ: New Praty ಕಾಂಗ್ರೆಸ್ ಗೆ ರಾಜೀನಾಮೆ ಕೊಟ್ಟು ಪಕ್ಷದಿಂದ ಹೊರ ಬಂದು ಸಂಚಲನ ಮೂಡಿಸಿದ್ದ ಗುಲಾಂ ನಬಿ ಆಜಾದ್ ಇಂದು ತಮ್ಮ ಹೊಸ ಪಕ್ಷವನ್ನ ಘೋಷಣೆ ಮಾಡ್ತಾರೆ ಅಂತಾ ಸುದ್ದಿ ಸಂಸ್ಥೆ ಎನ್ಐಎ ವರದಿ ಮಾಡಿದೆ.

ಇಂದು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್ ಸುದ್ದಿಗೋಷ್ಠಿ ನಡೆಸಲಿದ್ದು, ಅಲ್ಲಿ ತಮ್ಮ ಹೊಸ ರಾಜಕೀಯ ಪಕ್ಷದ ಹೆಸರು ಮತ್ತು ಸಿದ್ಧಾಂತಗಳನ್ನು ಬಹಿರಂಗಪಡಿಸಲಿದ್ದಾರೆ ಅಂತಾ ಹೇಳಲಾಗ್ತಿದೆ. ಆಗಸ್ಟ್ 29 ರಂದು ಗುಲಾಮ್ ನಬಿ ಆಜಾದ್ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ರು. ಇದು ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯನ್ನುಂಟು ಮಾಡಿತ್ತು. ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಬಳಿಕ ಗುಲಾಂ ನಬಿ ಆಜಾದ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ಗುಲಾಂ ನಬಿ ಆಜಾದ್ ಹೊಸ ಪಕ್ಷ ಕಟ್ಟೋದಾಗಿ ಹೇಳಿದ್ರು.

73 ವರ್ಷದ ಗುಲಾಂ ನಬಿ ಆಜಾದ್ ಆಗಸ್ಟ್ ನಲ್ಲಿ ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದಿದ್ದ 5 ಪುಟಗಳ ಸುದೀರ್ಘ ಪತ್ರದಲ್ಲಿ ಗುಲಾಂ ನಬಿ ಆಜಾದ್ ತಾವು ಕಾಂಗ್ರೆಸ್​ನಿಂದ ದೂರ ಸರಿಯುತ್ತಿರುವುದಕ್ಕೆ ಪಕ್ಷದಲ್ಲಿ ಹಿರಿಯ ನಾಯಕರನ್ನು ದೂರವಿಡುವುದು ಮತ್ತು ಪಕ್ಷದಲ್ಲಿ ಬೆಳೆಯುತ್ತಿರುವ ಪಕ್ಷಪಾತವೇ ಕಾರಣ ಎಂದು ಆರೋಪಿಸಿದ್ದರು. ಅಲ್ಲದೆ, ರಾಹುಲ್ ಗಾಂಧಿಯನ್ನು “ಅಪ್ರಬುದ್ಧ” ಎಂದು ಗುಲಾಂ ನಬಿ ಆಜಾದ್ ಟೀಕಿಸಿದ್ದರು. ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದ ಗುಲಾಂ ನಬಿ ಆಜಾದ್, ನನಗೆ ವೈಯಕ್ತಿಕ ಮಟ್ಟದಲ್ಲಿ ಇಡೀ ಗಾಂಧಿ ಕುಟುಂಬದ ಬಗ್ಗೆ ಅಪಾರ ಗೌರವವಿದೆ. ಇಲ್ಲಿ ನಾನು ವೈಯಕ್ತಿಕ ಸಂಬಂಧದ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ಪತನದ ಬಗ್ಗೆ ಮಾತನಾಡುತ್ತಿದ್ದೇನೆ. ರಾಹುಲ್ ಗಾಂಧಿ ರಾಜಕೀಯಕ್ಕೆ ಬಂದ ನಂತರ ಮತ್ತು ವಿಶೇಷವಾಗಿ ಜನವರಿ 2013ರ ನಂತರ ರಾಹುಲ್ ಗಾಂಧಿಯನ್ನು ಉಪಾಧ್ಯಕ್ಷರನ್ನಾಗಿ ನೇಮಿಸಿದ ನಂತರ ಕಾಂಗ್ರೆಸ್​ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಕಾಂಗ್ರೆಸ್ ಪೂರ್ತಿ ನಾಶವಾಗುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಮಟ್ಟದಲ್ಲಿ ತನಗೆ ಲಭ್ಯವಿರುವ ರಾಜಕೀಯ ಜಾಗವನ್ನು ಬಿಜೆಪಿಗೆ ಮತ್ತು ರಾಜ್ಯ ಮಟ್ಟದ ಜಾಗವನ್ನು ಪ್ರಾದೇಶಿಕ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ ಎಂದು ಹೇಳಿದ್ದರು.

“ನನ್ನ ಪಕ್ಷಕ್ಕೆ ನಾನು ಇನ್ನೂ ಧ್ವಜ, ಹೆಸರನ್ನು ನಿರ್ಧರಿಸಿಲ್ಲ. ಅದರ ಬಗ್ಗೆ ಜಮ್ಮು ಕಾಶ್ಮೀರದ ಜನರು ನಿರ್ಧರಿಸುತ್ತಾರೆ. ಆದರೆ, ನಾನು ನನ್ನ ಪಕ್ಷಕ್ಕೆ ಹಿಂದೂಸ್ತಾನಿ ಹೆಸರನ್ನು ಇಡುತ್ತೇನೆ, ಅದು ಎಲ್ಲರಿಗೂ ಅರ್ಥವಾಗುತ್ತದೆ” ಎಂದು ಗುಲಾಂ ನಬಿ ಆಜಾದ್ ಹೇಳಿದ್ರು.

ಇದನ್ನೂ ಓದಿ : Rajasthan Congress: ರಾಜಸ್ಥಾನ ಕಾಂಗ್ರೆಸ್ ನಲ್ಲಿ ಕ್ಷಿಪ್ರಕ್ರಾಂತಿ 90ಕ್ಕೂ ಹೆಚ್ಚು ಶಾಸಕರು ರಾಜೀನಾಮೆ

New Party Ghulam Nabi Azad likely to announce his new political party today

Comments are closed.