ಮಂಗಳೂರು : ಮಾಜಿ ಶಾಸಕರ ಪುತ್ರನ ಮನೆಯ ಮೇಲೆ ಎನ್‌ಐಎ ಅಧಿಕಾರಿಗಳ ದಾಳಿ

ಮಂಗಳೂರು : ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಮನೆಯ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 25 ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ. ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಇಂದು ಮುಂಜಾನೆ ಎನ್‌ಐಎಯ 25 ಅಧಿಕಾರಿಗಳ ತಂಡ ಮಂಗಳೂರಿನ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಾಷಾ ಅವರ ಮನೆಯ ಮೇಲೆ ದಾಳಿ ನಡೆದಿದೆ. ಮಂಗಳೂರು ನಗರ ಪೊಲೀಸರು ಎನ್‌ಐಎ ತಂಡಕ್ಕೆ ಭದ್ರತೆಯನ್ನು ಒದಗಿಸಿದ್ದಾರೆ. ಎನ್‌ಐಎ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಕುಟುಂಬಸ್ಥರಿಂದ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಭಾಷಾ ಅವರ ಮೊಮ್ಮಗಳು ಅಜ್ಮಲ್‌ ಕಾಸರಗೋಡು ಮೂಲದ ಸಿಯಾಝ್‌ ಎಂಬಾತನ ಜೊತೆಗೆ ವಿವಾಹವಾಗಿತ್ತು. ಆಕೆಯ ಪತಿ ಸಿರಿಯಾ ಮೂಲದ ಉಗ್ರ ಸಂಘಟನೆಯ ಜೊತೆಗೆ ಸಂಪರ್ಕದಲ್ಲಿದ್ದು, ಮಗು ಹಾಗೂ ಪತಿಯೊಂದಿಗೆ ಅಜ್ಮಲ್‌ ಶ್ರೀಲಂಕಾ ಮಾರ್ಗವಾಗಿ ಕತಾರ್‌ಗೆ ತೆರಳಿ ಅಲ್ಲಿಂದ ಸಿರಿಯಾದಲ್ಲಿ ಐಸಿಎಸ್‌ ಸಂಘಟನೆ ಸೇರಿಕೊಂಡಿದ್ದರು ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. ಬೆಳ್ಳಂಬೆಳಗ್ಗೆಯೇ ಮನೆಯ ಮೇಲೆ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳ ತಂಡ ಪರಿಶೀಲನೆಯನ್ನು ನಡೆಸುತ್ತಿದೆ.

Comments are closed.