ಬೆಂಗಳೂರು : ಐಸಿಎಸ್ ಜೊತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಮಂಗಳೂರು, ಬೆಂಗಳೂರು ಸೇರಿದಂತೆ ಐದು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ದಾಳಿಸಿದ್ದಾರೆ. ದಾಳಿಯ ವೇಳೆಯಲ್ಲಿ ರಾಜ್ಯದ ಇಬ್ಬರು ಸೇರಿದಂತೆ ನಾಲ್ಕು ಮಂದಿ ಐಸಿಎಸ್ ಉಗ್ರರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು, ಮಂಗಳೂರು ಸೇರಿದಂತೆ ದೇಶದ ಐದು ಕಡೆಗಳಲ್ಲಿಂದು ಎನ್‌ಐಎ ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ. ಬೆಂಗಳೂರಿನ ಶಂಕರ ವೆಂಕಟೇಶ್ ಪೆರುಮಾಳ್ ಹಾಗೂ ಮಂಗಳೂರಿನ ಅಮರ್ ಅಬ್ದುಲ್ ಅನ್ನೋ ಇಬ್ಬರು ಶಂಕಿತ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಜಿಹಾದಿ ಕೃತ್ಯಕ್ಕೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿರುವ ಕುರಿತು ಎನ್‌ಐಎ ಮಾರ್ಚ್ ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿಂದು ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ಇಬ್ಬರೂ ಶಂಕಿತ ಉಗ್ರರಿಗೆ ಕೇರಳದ ಅಮಿನ್ ಜೊತೆಗೆ ಸಂಪರ್ಕ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಶಂಕಿತ ಉಗ್ರರಿಂದ ಲ್ಯಾಪ್‌ಟಾಪ್, ಹಾರ್ಡ್‌ಡಿಸ್ಕ್, ಎಲೆಕ್ಟ್ರಾನಿಕ್ ವಸ್ತುಗಳು, ಸಿಮ್ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈ ಕುರಿತು ತನಿಖೆಯನ್ನು ಎನ್‌ಐಎ ಅಧಿಕಾರಿಗಳು ಮುಂದುವರಿಸಿದ್ದಾರೆ.