ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 7 ಜಿಲ್ಲೆಗಳಲ್ಲಿ ಕೊರೊನಾ ಕರ್ಪ್ಯೂ (ರಾತ್ರಿ ಕರ್ಪ್ಯೂ) ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಕಲಬುರಗಿ, ಬೀದರ್, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳ ಕಾಲ ಕೊರೊನಾ ಕರ್ಪ್ಯೂ ಜಾರಿ ಮಾಡಲಾಗಿದೆ. ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ಕರ್ಪ್ಯೂ ಹೇರಿಕೆ ಮಾಡಲಾಗಿದೆ.
ರಾಜ್ಯ ಸರಕಾರ ಈ ಕುರಿತು ಕೊರೊನಾ ಕರ್ಪ್ಯೂ ಮಾರ್ಗಸೂಚಿ ಯನ್ನು ಹೊರಡಿಸಲಾಗಿದೆ. ಸಿನಿಮಾ, ನೈಟ್ ಪಾರ್ಟಿ, ಹೋಟೆಲ್, ಬಾರ್, ಪಬ್ ಸಂಪೂರ್ಣ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಶನಿವಾರ ದಿಂದಲೇ ಈ ಆದೇಶ ಜಾರಿಗೆ ಬರಲಿದೆ.