ಬಿಹಾರ : Nitish Kumar resigns : ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾಗಳ ನಡುವೆಯೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ್ದಾರೆ.ಬಿಹಾರದ ರಾಜ್ಯಪಾಲ ಫಾಗು ಚೌಹಾಣ್ಗೆ ನಿತೀಶ್ ಕುಮಾರ್ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಜೆಡಿ(ಯು) ಹಾಗೂ ಬಿಜೆಪಿ ನಡುವಿನ ಮೈತ್ರಿಯನ್ನು ಮುರಿದುಕೊಳ್ಳುವ ಬಗ್ಗೆ ಇಂದು ಔಪಚಾರಿಕವಾಗಿ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ .
ನಮ್ಮ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆಯಲು ಬಿಜೆಪಿ ನಡೆಸಿದ ಹಲವಾರು ಪಿತೂರಿಯ ಕ್ರಮಗಳೇ ಇಂದು ಈ ನಿರ್ಧಾರಕ್ಕೆ ಕಾರಣ ಎಂದು ನಿತೀಶ್ ಕುಮಾರ್ ಕಿಡಿಕಾರಿದ್ದಾರೆ. ಆಡಳಿತಾರೂಢ ಜೆಡಿಯು , ಬಿಜೆಪಿ ಹಾಗೂ ಪ್ರತಿಪಕ್ಷವಾದ ಆರ್ಜೆಡಿ ಆಗಸ್ಟ್ 9ರಂದು ತಮ್ಮ ಶಾಸಕರ ಪ್ರತ್ಯೇಕ ಸಭೆಗಳನ್ನು ಪಾಟ್ನಾದಲ್ಲಿ ನಡೆಸಿತ್ತು .
ಜೆಡಿಯು ಮಾಜಿ ರಾಷ್ಟ್ರಾಧ್ಯಕ್ಷ ಆರ್ಸಿಪಿ ಸಿಂಗ್ ತಮ್ಮ ಸ್ಥಾನದಿಂದ ನಿರ್ಗಮಿಸಿದ ಬಳಿಕ ನಿತೀಶ್ ಕುಮಾರ್ ಸಭೆ ಕರೆದಿದ್ದರು. ಆರ್ಸಿಪಿ ಸಿಂಗ್ ತಮ್ಮ ಮೇಲೆ ಹೊರಿಸಲಾಗಿದ್ದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ವಿವರಣೆಯನ್ನು ಕೋರಿ ಜೆಡಿಯು ನೋಟಿಸ್ ಕಳುಹಿಸಿದ ಬಳಿಕ ರಾಜೀನಾಮೆಯನ್ನು ಸಲ್ಲಿಸಿದ್ದರು.
ಈ ನಡುವೆ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ತಮ್ಮ ಬೆಂಬಲ ಪತ್ರವನ್ನು ನೀಡಲು ನಿತೀಶ್ ಕುಮಾರ್ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಬಿಹಾರದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೋಹನ್ ಝಾ ನಮ್ಮ ಪಕ್ಷದ ಶಾಸಕರು ರಾಜ್ಯದಲ್ಲಿ ಬಿಜೆಪಿ ವಿರೋಧಿ ಸರ್ಕಾರಕ್ಕೆ ಮಾತ್ರ ಬೆಂಬಲ ನೀಡುತ್ತಾರೆ ಎಂದು ಹೇಳಿದ್ದಾರೆ . ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ 19 ಶಾಸಕರನ್ನು ಹೊಂದಿದೆ.
ಮೂಲಗಳ ಪ್ರಕಾರ ನಿತೀಶ್ ಕುಮಾರ್ ಆಗಸ್ಟ್ ಎಂಟರಂದು ಸಂಜೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಕಾಂಗ್ರೆಸ್ನಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.
ಬಿಹಾರ ವಿಧಾನಸಭೆಯಲ್ಲಿ 12 ಶಾಸಕರನ್ನು ಹೊಂದಿರುವ ತಮ್ಮ ಪಕ್ಷವು ಬಿಜೆಪಿ ತೊರೆದರೆ ಜೆಡಿಯುಗೆ ಬೆಂಬಲ ನೀಡಲು ಸಿದ್ಧ ಎಂದು ಸಿಪಿಐ(ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಹೇಳಿದ್ದಾರೆ.
ಇದನ್ನು ಓದಿ : Pingali Venkayya : ತ್ರಿವರ್ಣ ಧ್ವಜದ ವಿನ್ಯಾಸಗಾರ ಪಿಂಗಲಿ ವೆಂಕಯ್ಯ ಯಾರು ಗೊತ್ತಾ?
ಇದನ್ನೂ ಓದಿ : Siddaramaiah Congress PM candidate : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ : ಪ್ರಧಾನಿ ಅಭ್ಯರ್ಥಿಯಾಗಿ ಸಿದ್ಧರಾಮಯ್ಯ
Nitish Kumar resigns as Bihar CM after ending alliance with BJP