18-45 ವರ್ಷದವರಿಗೆ ಲಸಿಕೆ ಸದ್ಯಕ್ಕಿಲ್ಲ : ರಾಜ್ಯ ಸರಕಾರದ ಪರಿಷ್ಕೃತ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವ್ಯಾಕ್ಸಿನೇಷನ್ ನೀತಿಯಲ್ಲಿ ಬದಲಾವಣೆಯನ್ನು ತಂದಿದೆ. ಅದ್ರಲ್ಲೂ 18-45 ವರ್ಷದೊಳಗಿನವರ ಲಸಿಕೆ ನೀಡುವುದಾಗಿ ರಾಜ್ಯ ಸರಕಾರ ಘೋಷಣೆಯನ್ನು ತಂದಿದೆ. ಆದರೆ ಲಸಿಕೆಯ ಕೊರತೆಯಿಂದಾಗಿ ಸದ್ಯಕ್ಕೆ ಲಸಿಕೆ ಸಿಗೋದು ಅನುಮಾನ.

ರಾಜ್ಯ ಸರಕಾರ ಇಲ್ಲಿಯವರೆಗೆ ಒಟ್ಟು 1,01,60,060 ರಷ್ಟು ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಯನ್ನು ಸ್ವೀಕರಿಸಿದೆ. ಆದರೆ ರಾಜ್ಯದಲ್ಲಿ ಪ್ರಸ್ತುತ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿಲ್ಲ. ಹೀಗಾಗಿ ಮೊದಲ ಡೋಸ್ ಪಡೆದು ಎರಡನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಕಾಯುತ್ತಿರುವವರಿಗೆ ಮೊಬೈಲ್ ಎಸ್ಎಂಎಸ್ ಮೂಲಕ ತಿಳಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಅಲ್ಲದೇ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ನಿರ್ದೇಶಕಿ ಡಾ.ಅರುಂಧತಿ ಚಂದ್ರಶೇಖರ್ ಅವರು ಸ್ಪಷ್ಟನೆಯನ್ನು ನೀಡಿದ್ದು, ಆರಂಭಿಕ ಹಂತದಲ್ಲಿ ಮುಂಚೂಣಿ ಕಾರ್ಯಕರ್ತರು, ದುರ್ಬಲ ವರ್ಗದವರಿಗೆ ನೀಡಲು ಮುಂದಾಗಿದೆ.

ಈಗಾಗಲೇ 60 ವರ್ಷ ಹಾಗೂ 45 ವರ್ಷ ಮೇಲ್ಪಟ್ಟ ಬಹುತೇಕರು ಮೊದಲ ಡೋಸ್ ಪಡೆದುಕೊಂಡಿದ್ದರು. ಆದರೆ ಎರಡನೇ ಡೋಸ್ ಪಡೆಯಲು ತೆರೆಳಿದಾಗ ಲಸಿಕೆಯ ಲಭ್ಯತೆಯಿಲ್ಲ ಎಂದು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ತಿಳಿಸುತ್ತಿದ್ದಾರೆ. ಮೇ 22ರಿಂದಲೇ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ಘೋಷಣೆಯನ್ನು ಮಾಡಿದ್ದರು ಕೂಡ ಸದ್ಯಕ್ಕೆ ಲಸಿಕೆ ನೀಡುವುದು ಕಷ್ಟಸಾಧ್ಯ. ರಾಜ್ಯ ಸರಕಾರ ಈಗಾಗಲೇ ಎರಡನೇ ಡೋಸ್ ಪಡೆಯುವವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವಂತೆ ಸೂಚಿಸಿದೆ.

https://kannada.newsnext.live/corona-covid-19-mother-on-oxygen-concentrator-support-viral-photo/

Comments are closed.