ಉತ್ತರ ಪ್ರದೇಶ : ಮಹಿಳೆಯೋರ್ವಳು ನರ್ಸ್ (Nurse Murder) ಕೆಲಸಕ್ಕೆ ಸೇರಿದ ಮೊದಲ ದಿನವೇ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದ ನ್ಯೂ ಜೀವನ್ ಆಸ್ಪತ್ರೆಯಲ್ಲಿ ನಡೆದಿದೆ. ಮಹಿಳೆಯನ್ನ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕುರಿತು ಪೋಷಕರು ಆರೋಪ ಮಾಡಿದ್ದಾರೆ.

ನ್ಯೂ ಜೀವನ್ ಖಾಸಗಿ ನರ್ಸಿಂಗ್ ಹೋಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮೂವರ ವಿರುದ್ದ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ನ್ಯೂ ಜೀವನ್ ಆಸ್ಪತ್ರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸಾವಿನ ಕಾರಣವನ್ನು ಖಚಿತಪಡಿಸಿ ಕೊಳ್ಳಲು, ಮರಣೋತ್ತರ ಪರೀಕ್ಷೆಗೆ ಆದೇಶಿಸಲಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಮತ್ತು ನಂತರ ಹತ್ಯೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನಾವ್‌ನ ಹೆಚ್ಚುವರಿ ಎಸ್ಪಿ ಶಶಿಶೇಖರ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಸಂಬಂಧಿಗಳಿಂದಲೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ : ಹಣಕ್ಕಾಗಿ ವಿಡಿಯೋ ಚಿತ್ರೀಕರಿಸಿದ ಪಾಪಿ ಪತಿ
ಇದನ್ನೂ ಓದಿ : ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ : 12 ಅಭ್ಯರ್ಥಿಗಳು ಅರೆಸ್ಟ್
Nurse Murder woman found hanging from Hospital, Rape murder Alleges Family