ದೇಶದಾದ್ಯಂತ ನವರಾತ್ರಿಯ ಸಂಭ್ರಮ. ಶಾಲಾ ಮಕ್ಕಳಿಗೆ ಈಗಾಗಲೇ ದಸರಾ ರಜೆಯನ್ನು ನೀಡಲಾಗಿದೆ. ಧಾರ್ಮಿಕ ಕ್ಷೇತ್ರಗಳು, ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮೂಲಕ ಮಕ್ಕಳು ದಸರಾ ರಜೆಯ ಮೋಜನ್ನು ಅನುಭವಿಸುತ್ತಿದ್ದಾರೆ. ಇದೇ ಹೊತ್ತಲ್ಲೇ ಕೇಂದ್ರ ಸರಕಾರ ದೇಶದಲ್ಲಿನ ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಸದ್ಯ ದೇಶದಲ್ಲಿ ಒನ್ ನೇಷನ್ ಒನ್ ರೇಷನ್ , ಒನ್ ನೇಷನ್ ಒನ್ ಎಲೆಕ್ಷನ್ ಮಾತುಗಳು ಕೇಳಿಬರುತ್ತಿದೆ. ಇದೀಗ ಒನ್ ನೇಷನ್ ಒನ್ ಸ್ಟೂಡೆಂಟ್ಸ್ (One Nation One Students) ಯೋಜನೆ ಜಾರಿಗೆ ಬರಲಿದೆ.

ಕೇಂದ್ರ ಸರಕಾರ ದೇಶದಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಪದ್ದತಿಯಲ್ಲಿ ಈಗಾಗಲೇ ಹಲವು ರೀತಿಯಲ್ಲಿ ಬದಲಾವಣೆ ಗಳು ಸಂಭವಿಸಿವೆ. ಶಿಕ್ಷಣ ಇಲಾಖೆ ಹೊಸ ಪಠ್ಯಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಹಲವು ರಾಜ್ಯಗಳು ಈಗಾಗಲೇ ಹೊಸ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿವೆ. ಈ ನಡುವಲ್ಲೇ ಕೇಂದ್ರ ಸರಕಾರ ಹೊಸ ಯೋಜನೆಯನ್ನು ಜಾರಿಗೆ ತರಲಿದೆ.
ಇದನ್ನೂ ಓದಿ : ಅಂಗನವಾಡಿ ಕೇಂದ್ರಕ್ಕೆ ದಿಢೀರ್ ಭೇಟಿ : ಮಕ್ಕಳ ದುಸ್ಥಿತಿ ಕಂಡು ಮರುಗಿದ ನ್ಯಾಯಾಧೀಶೆ ಅರುಣಾ ಕುಮಾರಿ
ಕೇಂದ್ರದ ಶಿಕ್ಷಣ ಇಲಾಖೆ ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ ದೇಶದಾದ್ಯಂತ ಒನ್ ನೇಷನ್ ಒನ್ ಸ್ಟೂಡೆಂಟ್ ಐಡಿಯನ್ನು ನೀಡಲು ಮುಂದಾಗಿದೆ. ಇದಕ್ಕಾಗಿ ಹೊಸ ಯೋಜನೆಯೊಂದನ್ನು ಜಾರಿಗೆ ತರುತ್ತಿದೆ. ಈ ಗುರುತಿನ ಸಂಖ್ಯೆಯ ಮೂಲಕ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದ ವರೆಗೆ ಶಾಶ್ವತ ಶಿಕ್ಷಣ ಖಾತೆ ನೋಂದಣಿಯ( APAAR) ಗುರುತಿನ ಸಂಖ್ಯೆಯನ್ನು ನೀಡಲಿದೆ.

ಎಐಸಿಟಿಇ ಅಧ್ಯಕ್ಷ ಸೀತರಾಮನ್ ಅವರು ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಒನ್ ನೇಷನ್ ಒನ್ ಸ್ಟೂಡೆಂಟ್ ಐಡಿ ದೇಶದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ಬರಲಿದೆ. ಎಜುಕೇಶನ್ ಐಡಿಯ ಮೂಲಕ ವಿದ್ಯಾರ್ಥಿಗಳು ತಮ್ಮ ಎಲ್ಲಾ ದಾಖಲೆಗಳನ್ನು ಒಂದೇ ಕಡೆಯಲ್ಲಿ ಇರಿಸಿಕೊಳ್ಳಬಹುದು.
ಇದನ್ನೂ ಓದಿ : 5,8,9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ : ರಾಜ್ಯ ಸರಕಾರದಿಂದ ಅಧಿಸೂಚನೆ ಪ್ರಕಟ
ಎಜುಲಾಕರ್ ವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದ ವರೆಗಿನ ಎಲ್ಲಾ ದಾಖಲೆಗಳು ಒಂದೇ ಲಾಕರ್ ನಲ್ಲಿ ಸಿಗುವುದರಿಂದ ಸಾಕಷ್ಟು ಅನುಕೂಲತೆಗಳಿಗೆ. ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಅಂಕಪಟ್ಟಿ, ಶೈಕ್ಷಣಿಕ ದಾಖಲೆ ಹಾಗೂ ಅವರ ಇತರ ವಿಚಾರಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗಲಿದೆ.
ಆಧಾರ್ ಸಂಖ್ಯೆ, ಪ್ಯಾನ್ ಸಂಖ್ಯೆಯಂತೆಯೇ ಇನ್ಮುಂದೆ ವಿದ್ಯಾರ್ಥಿಗಳಿಗೂ ಒಂದೊಂದು ಕೋಡ್ ನೀಡುವುದರಿಂದ ವಿದ್ಯಾರ್ಥಿಗಳ ದಾಖಲೆಗಳನ್ನು ಸುಲಭವಾಗಿ ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ. ಈ ಯೋಜನೆಯನ್ನು ದೇಶದಾದ್ಯಂತ ಜಾರಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಕ್ರಮವಹಿಸಿದೆ.
ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿಯಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ, ಶಿಕ್ಷಕರು-ಅಧಿಕಾರಿಗಳು ಜವಾಬ್ದಾರಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ
one nation one student id implementation indian Government good news to School Students on Dussehra vacation