ಆಮ್ಲಜನಕ ಕೊರತೆ : 20 ಮಂದಿ ಸಾವು, ಅಪಾಯದಲ್ಲಿ 200 ಕೊರೊನಾ ಸೋಂಕಿತರು

ದೆಹಲಿ : ಆಮ್ಲಜನಕ ಕೊರತೆಯಿಂದಾಗಿ 20 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿ, 200ಕ್ಕೂ ಅಧಿಕ ಮಂದಿ ಅಪಾಯದಲ್ಲಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಸುಮಾರು 200 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಆಮ್ಲಜನಕ ಕೊರತೆಯಿಂ ದಾಗಿ 20 ಮಂದಿ ಸಾವನ್ನಪ್ಪಿದ್ದಾರೆ. 80 ಮಂದಿಗೆ ಆಮ್ಲಜನಕ ಒದಗಿಸಲಾಗಿದೆ. 35 ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಿಕೆ ಬಲೂಜಾ ತಿಳಿಸಿದ್ದಾರೆ.

ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ 25 ರೋಗಪೀಡಿತ ರೋಗಿಗಳು ಸಾವನ್ನಪ್ಪಿದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಎರಡು ಗಂಟೆಗಳ ಕಾಲ ಆಮ್ಲಜನಕವಿದೆ ಮತ್ತು ಇನ್ನೂ 60 ರೋಗಿಗಳು ಅಪಾಯದಲ್ಲಿದ್ದಾರೆ ಎಂದಿದ್ದಾರೆ.

ದೇಶದಲ್ಲಿ ಕೊರೊನಾವೈರಸ್ ಪ್ರಕರಣಗಳು ಅಭೂತಪೂರ್ವ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದಂತೆ, ದೆಹಲಿಯ ಆಸ್ಪತ್ರೆಗಳು ಆಮ್ಲಜನಕ ದ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ರಾಜಧಾನಿಯ ಪ್ರಮುಖ ಆಸ್ಪತ್ರೆಗಳು ಈಗ ಕೆಲವೇ ಗಂಟೆಗಳ ವರೆಗೆ ಆಮ್ಲಜನಕ ಪೂರೈಸುವ ಸಾಮರ್ಥ್ಯವನ್ನು ಹೊಂದಿವೆ. ಆಮ್ಲಜನಕ ಕೊರತೆಯಿಂದಾಗಿ ಹೊಸ ರೋಗಿಗಳನ್ನು ಆಸ್ಪತ್ರೆಗೆ ಸೇರಿಸಿಕೊಳ್ಳಲು ಹಿಂದೇಟು ಹಾಕಿವೆ.

Comments are closed.