ಆಮ್ಲಜನಕ ಟ್ಯಾಂಕರ್ ಸೋರಿಕೆ : ಮಹಾದುರಂತದಲ್ಲಿ 22 ಮಂದಿ ಸಾವು

ಮಹಾರಾಷ್ಟ್ರ: ದೇಶದ ಹಲವು ರಾಜ್ಯದಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಮಹಾ ದುರಂತ ಸಂಭವಿಸಿದೆ. ಆಮ್ಲಜನಕದ ಟ್ಯಾಂಕರ್ ಸೋರಿಕೆಯಾದ ಹಿನ್ನೆಲೆಯಲ್ಲಿ 22 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿರುವ ಜಾಕೀರ್ ಹುಸೇನ್ ಆಸ್ಪತ್ರೆಯಲ್ಲಿ ಟ್ಯಾಂಕರ್ ಗೆ ಆಮ್ಲಜನಕ ತುಂಬುತ್ತಿದ್ದಾಗ ಟ್ಯಾಂಕರ್ ಸೋರಿಕೆಯಾಗಿದೆ. ಇದರಿಂದಾಗಿ ಆಮ್ಲಜನಕದ ಕೊರತೆಯಿಂದಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ಸೂರಜ್ ಮಾಂಧರೆ ತಿಳಿಸಿದ್ದಾರೆ.

ಟ್ಯಾಂಕರ್ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಆಸ್ಪತ್ರೆಯಲ್ಲಿರುವ ಸಾಕಷ್ಟು ಸಂಖ್ಯೆಯ ರೋಗಿಗಳಿಗೆ ಉಸಿರಾಟದ ಸಮಸ್ಯೆಯಿದ್ದು, ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಇನ್ನು ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಪ್ರಮಾಣ ತೀವ್ರವಾಗಿ ಹೆಚ್ಚಳವಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ 58,924 ಹೊರ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 38,98,262 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ60,824 ಕ್ಕೆ ತಲುಪಿದೆ.

Comments are closed.