2023 ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: 8 ಮಂದಿ ಕನ್ನಡಿಗರಿಗೆ ಪುರಸ್ಕಾರ

ನವದೆಹಲಿ: (Padma Award 2023 announced) ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿ ಪುರಸ್ಕಾರವನ್ನು ಸರಕಾರ ಘೋಷಿಸಿದ್ದು, ಒಟ್ಟು 106 ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಇದರಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ, ಹಾಗೂ 91 ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಇದರಲ್ಲಿ 8 ಮಂದಿ ಕನ್ನಡಿಗರಿಗೆ ಪದ್ಮ ಪುರಸ್ಕಾರ ನೀಡಲಾಗುವುದು.

ವಿಜ್ಞಾನ ಎಂಜಿನಿಯರಿಂಗ್‌ ವಿಭಾಗದಲ್ಲಿ ಖಾದರ್‌ ವಲ್ಲಿ ದುಡೇಕುಲಾ ಹಾಗೂ ಕಲಾ ವಿಭಾಗದಲ್ಲಿ ರಾಣಿ ಮಾಚಯ್ಯ, ನಾಡೋಜ ಪಿಂಡಿಪನಹಳ್ಳಿ ಮುನಿವೆಂಕಟಪ್ಪ, ಶಾ.ರಶೀದ್‌ ಅಹ್ಮದ್‌ ಖಾದ್ರಿ ಹಾಗೂ ಪುರಾತತ್ವ ಕ್ಷೇತ್ರದಲ್ಲಿ ಎಸ್.‌ ಸುಬ್ಬರಾಮನ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ, ಹಿರಿಯ ಸಾಹಿತಿ ಎಸ್‌ ಎಲ್‌ ಭೈರಪ್ಪ, ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

2023 ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ದೇಶಕ್ಕೆ ನೀಡಿರುವ ಶ್ರೀಮಂತ ಮತ್ತು ವೈವಿಧ್ಯಮಯ ಕೊಡುಗೆಗಳು ಮತ್ತು ನಮ್ಮ ಬೆಳವಣಿಗೆಯ ಹಾದಿ ಹೆಚ್ಚಿಸಲು ಅವರ ಪ್ರಯತ್ನಗಳನ್ನು ದೇಶ ಗೌರವಿಸುತ್ತದೆ. ಎಂದು ಪ್ರಧಾನಿ ಮೋದಿ ಅವರು ಟ್ವೀಟ್‌ ಮಾಡುವುದರ ಮೂಲಕ ಅಭಿನಂದಿಸಿದ್ದಾರೆ.

ಇನ್ನೂ ಪದ್ಮ ಪ್ರಶಸ್ತಿ ಮೂಲಕ ನಾಡಿಗೆ ಗೌರವ ತಂದಿರುವ ಸಾಧಕರನ್ನು ಟ್ವೀಟ್‌ ಮಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವು ಕಿರು ಪರಿಚಯ ಮಾಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಅವರನ್ನು ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿಯಾದ ಪದ್ಮವಿಭೂಷಣಕ್ಕೆ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯಕ್ಕೆ ಹೆದರಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಮಹಿಳೆ

ಇದನ್ನೂ ಓದಿ : BBC documentary show from SFI: ಜೆಎನ್‌ಯು ನಂತರ ಎಸ್‌ಎಫ್‌ಐ ಸದಸ್ಯರಿಂದ ಬಿಬಿಸಿ ಸಾಕ್ಷ್ಯಾಚಿತ್ರ ಪ್ರದರ್ಶನ: 4 ವಿದ್ಯಾರ್ಥಿಗಳು ಅರೆಸ್ಟ್‌

ಇದನ್ನೂ ಓದಿ : BBC documentary screening: ದೆಹಲಿ ಜಾಮಿಯಾ ವಿವಿಯಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಸ್ಕ್ರೀನಿಂಗ್‌: ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್‌

Padma Award 2023 announced: 8 Kannadigas awarded

Comments are closed.