Pahalgam Terror Attack – ಜಮ್ಮು-ಕಾಶ್ಮೀರ : ಪಹಲ್ಗಾಮ್ (Pahalgam ) ಸಮೀಪದಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಶಿವಮೊಗ್ಗ ಮೂಲದ ಉದ್ಯಮಿ ಸೇರಿದಂತೆ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 20 ಮಂದಿ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉದ್ಯಮಿಯ ಪತ್ನಿ ಹಾಗೂ ಪುತ್ರ ಸೇಫ್ ಆಗಿದ್ದು, ಉಗ್ರರ ವಿರುದ್ದದ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.
ಜಮ್ಮುಕಾಶ್ಮೀರದ ಪಹಲ್ಗಾಮ್ ಗಿರಿಧಾಮದಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ಬೈಸರನ್ ಹುಲ್ಲುಗಾವಲಿನ ಮಿನಿ ಸ್ವಿಟ್ಜರ್ಲೆಂಡ್’ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಕಾಲ್ನಡಿಗೆ ಹಾಗೂ ಕುದುರೆ ಸವಾರಿ ನಡೆಸುತ್ತಿದ್ದರು. ಈ ವೇಳೆಯಲ್ಲಿ ಉಗ್ರ ತಂಡ ಏಕಾಏಕಿ ದಾಳಿ ನಡೆಸಿದೆ. ದಾಳಿಯಲ್ಲಿ ಶಿವಮೊಗ್ಗದ ವಿಜಯನಗರದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಎಂಬವರು ಸಾವನ್ನಪ್ಪಿದ್ದು, ಪತ್ಬಿ ಹಾಗೂ ಪಲ್ಲವಿ ಹಾಗೂ ಪುತ್ರ ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪಹಲ್ಗಾಮ್ ನಲ್ಲಿ ನಡೆದಿರುವ ದಾಳಿ ಹೊಣೆಯನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾದ ಸ್ಥಳೀಯ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಘಟನೆಯ ಕುರಿತು ಮಾಧ್ಯಮದವರ ಜೊತೆಗೆ ಮಂಜುನಾಥ್ ಅವರ ಪತ್ನಿ ಪಲ್ಲವಿ ಅವರು ಮಾತನಾಡಿದ್ದು, ಎಪ್ರಿಲ್ 19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ಬಂದಿದ್ದೇವು. ನಮ್ಮ ಕಣ್ಣೇದುರಲ್ಲೇ ಪತಿಯನ್ನು ಗುಂಡು ಹಾರಿಸಿಕೊಂದಿದ್ದಾರೆ. ಈ ವೇಳೆಯಲ್ಲಿ ನನ್ನ ಮಗನಿಗೆ ಬೈದು ಹಲ್ಲೆ ಮಾಡಿದ್ದಾರೆ. ನನ್ನನ್ನು ಹಾಗೂ ಮಗನನ್ನು ಕೊಂದು ಬಿಡು ಎಂದು ಹೇಳಿದ್ವಿ. ನಿನ್ನನ್ನು ಕೊಲ್ಲುವುದಿಲ್ಲ ಮೋದಿಗೆ ಹೇಳು ಎಂದಿದ್ದಾರೆ ಎಂದು ಪಲ್ಲವಿ ತಿಳಿಸಿದ್ದಾರೆ.
ಉದ್ಯಮಿ ಮಂಜುನಾಥ್ ಅವರ ಸಾವಿನ ಸುದ್ದಿ ತಿಳಿಯುತ್ತಲೇ ಶಿವಮೊಗ್ಗದ ವಿಜಯನಗರದಲ್ಲಿ ಇರುವ ಮಂಜುನಾಥ್ ಅವರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಗೆ ಎಲ್ಲೆಡೆಯಿಂದಲೂ ಬಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನು ಘಟನಾ ಸ್ಥಳದಲ್ಲಿ ಭದ್ರತಾ ಪಡೆಗಳು ಸುತ್ತುವರಿದು ಉಗ್ರರ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಸದಾ ಪ್ರವಾಸಿಗರಿಂದಲೇ ತುಂಬಿ ತುಳುಕುತ್ತಿದ್ದ ಪಹಲ್ಗಾಮ್ ಪಟ್ಟಣದಲ್ಲಿ ಸ್ಮಶಾನ ಮೌನ ಆವರಿಸಿದೆ.
ದಾಳಿಕೋರರನ್ನು ಬಿಡುವುದಿಲ್ಲ ಎಂದ ಪ್ರಧಾನಿ ಮೋದಿ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರೀಯಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮಾತ್ರವಲ್ಲ ಅಮಿತಾ ಶಾ ಅವರು ಖುದ್ದು ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆಯೂ ಸೂಚಿಸಿದ್ದಾರೆ.
X ನಲ್ಲಿ ಪೋಸ್ಟ್‌ನಲ್ಲಿ, ಭಯೋತ್ಪಾದಕ ದಾಳಿಯ ಹಿಂದೆ ಇರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ಭಯೋತ್ಪಾದಕ ದಾಳಿಯ ನಂತರ, ಅಮಿತ್ ಶಾ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ಮತ್ತು ಗೃಹ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ. ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸೇರಿದಂತೆ ಜಮ್ಮು ಮತ್ತು ಕಾಶ್ಮೀರ ಅಧಿಕಾರಿಗಳು ವರ್ಚುವಲ್ ಆಗಿ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ, ಎಕ್ಸ್‌ನಲ್ಲಿ ಘಟನೆಯ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯಿಂದ ತನಗೆ ನೋವಾಗಿದೆ. ಮೃತರ ಕುಟುಂಬ ಸದಸ್ಯರೊಂದಿಗೆ ನನ್ನ ಆಲೋಚನೆಗಳು ಇವೆ. ಈ ಭೀಕರ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಿಡಲಾಗುವುದಿಲ್ಲ, ಮತ್ತು ಕಠಿಣ ಪರಿಣಾಮಗಳನ್ನು ಹೊಂದಿರುವ ದುಷ್ಕರ್ಮಿಗಳ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಘಟನೆಯ ಬಗ್ಗೆ ಪ್ರಧಾನಿ ಮೋದಿಗೆ ವಿವರಿಸಿದೆ ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದೆ. ಎಲ್ಲಾ ಸಂಸ್ಥೆಗಳೊಂದಿಗೆ ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸಲು ಶೀಘ್ರದಲ್ಲೇ ಶ್ರೀನಗರಕ್ಕೆ ತೆರಳುತ್ತೇನೆ ಎಂದಿದ್ದಾರೆ.
Also Read : ಮನೆಬಿಟ್ಟು ಹೋದ ಪತ್ನಿ : ಮಗಳು, ಅತ್ತೆ, ನಾದಿನಿಗೆ ಗುಂಡು ಹಾರಿಸಿ ಹತ್ಯೆಗೈದ ಪತಿ ..!
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ದಾಳಿಯನ್ನು ಖಂಡಿಸಿದರು ಮತ್ತು X ನಲ್ಲಿ ಬರೆದಿದ್ದಾರೆ, “ನನಗೆ ನಂಬಲಾಗದಷ್ಟು ಆಘಾತವಾಗಿದೆ. ನಮ್ಮ ಸಂದರ್ಶಕರ ಮೇಲಿನ ಈ ದಾಳಿ ಅಸಹ್ಯಕರವಾಗಿದೆ. ಈ ದಾಳಿಯ ದುಷ್ಕರ್ಮಿಗಳು ಪ್ರಾಣಿಗಳು, ಅಮಾನವೀಯ ಮತ್ತು ತಿರಸ್ಕಾರಕ್ಕೆ ಅರ್ಹರು. ಖಂಡನೆಯ ಯಾವುದೇ ಪದಗಳು ಸಾಕಾಗುವುದಿಲ್ಲ. ಮೃತರ ಕುಟುಂಬಗಳಿಗೆ ನಾನು ನನ್ನ ಸಂತಾಪಗಳನ್ನು ಕಳುಹಿಸುತ್ತೇನೆ. ನಾನು ನನ್ನ ಸಹೋದ್ಯೋಗಿ @sakinaitoo ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಗಾಯಾಳುಗಳ ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡಲು ಅವರು ಆಸ್ಪತ್ರೆಗೆ ತೆರಳಿದ್ದಾರೆ. ನಾನು ತಕ್ಷಣ ಶ್ರೀನಗರಕ್ಕೆ ಹಿಂತಿರುಗುತ್ತೇನೆ.”
Also Read : LPG Gas Booking: ನೀವು ಎಲ್ ಪಿ ಜಿ ಗ್ರಾಹಕರೇ , ಹಾಗಾದರೆ ಈ ಸುದ್ದಿ ನಿಮಗಾಗಿ
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, “ಪಹಲ್ಗಾಮ್‌ನಲ್ಲಿ ದಾಖಲಾಗಿರುವವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಗೊಂಡ ಪ್ರವಾಸಿಗರನ್ನು ಅನಂತನಾಗ್‌ನ ಜಿಎಂಸಿಗೆ ಸ್ಥಳಾಂತರಿಸಲಾಗಿದೆ. ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆ” ಎಂದು ಬರೆದಿದ್ದಾರೆ.
Pahalgam Terror Attack Jammu Kashmir Terrorist firing Shivamogga Manjunath Dies Kannada News