ಮಂಗಳವಾರ, ಏಪ್ರಿಲ್ 29, 2025
HomeNationalPanipat Cylinder Blast‌ : ಗ್ಯಾಸ್ ಸಿಲಿಂಡರ್ ಸ್ಫೋಟ ಮನೆಗೆ ಬೆಂಕಿ : ಒಂದೇ ಕುಟುಂಬದ...

Panipat Cylinder Blast‌ : ಗ್ಯಾಸ್ ಸಿಲಿಂಡರ್ ಸ್ಫೋಟ ಮನೆಗೆ ಬೆಂಕಿ : ಒಂದೇ ಕುಟುಂಬದ 6 ಮಂದಿ ಸಾವು

- Advertisement -

ಪಾಣಿಪತ್‌ : Panipat Cylinder Blast : ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು ಮನೆಗೆ ಬೆಂಕಿ ತಗುಲಿ ಆರು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ತಂದೆ, ತಾಯಿಯ ಜೊತೆಗೆ ಮನೆಯಲ್ಲಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.

ಮೃತರನ್ನು ಅಬ್ದುಲ್, 45, ಅವರ 40 ವರ್ಷದ ಪತ್ನಿ, 18 ಮತ್ತು 16 ವರ್ಷದ ಇಬ್ಬರು ಪುತ್ರಿಯರು ಮತ್ತು 12 ಮತ್ತು 10 ವರ್ಷದ ಇಬ್ಬರು ಪುತ್ರರು ಎಂದು ಗುರುತಿಸಲಾಗಿದೆ. ಪಾಣಿಪತ್‌ನ ಕಾರ್ಖಾನೆಯೊಂದರಲ್ಲಿ ದಂಪತಿ ಕೆಲಸ ಮಾಡುತ್ತಿದ್ದರು. ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ನಗರದ ಜನವಸತಿ ಪ್ರದೇಶದಲ್ಲಿ ವಾಸವಿದ್ದ ಕುಟುಂಬ ಪಶ್ಚಿಮ ಬಂಗಾಳದಿಂದ ವಲಸೆ ಬಂದಿತ್ತು ಎಂದು ತಿಳಿದುಬಂದಿದೆ. ಸಿಲಿಂಡರ್‌ ಸ್ಪೋಟಗೊಂಡು ಗ್ಯಾಸ್‌ ಸೋರಿಕೆಯಾಗಿದೆ. ಇದರಿಂದ ಬೆಂಕಿ ಕಾಣಿಸಿಕೊಂಡಿದೆ.

ಮನೆಯಿಂದ ದಟ್ಟಹೊಗೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದರೂ ಕೂಡ, ರಕ್ಷಣಾ ತಂಡ ಪತ್ತೆ ಹಚ್ಚುವಷ್ಟರಲ್ಲಿ ಸಂತ್ರಸ್ತರು ಸುಟ್ಟು ಕರಕಲಾಗಿದ್ದರು ಎಂದು ಪಾಣಿಪತ್‌ನ ತಹಸಿಲ್ ಕ್ಯಾಂಪ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಇನ್‌ಸ್ಪೆಕ್ಟರ್ ಫೂಲ್ ಕುಮಾರ್ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಕೋಟ : ಇಸ್ಪೀಟು ಅಡ್ಡೆಯ ಮೇಲೆ ದಾಳಿ ಪೊಲೀಸರ ದಾಳಿ : 4 ಮಂದಿ ಅರೆಸ್ಟ್

ಕೋಟ :ಹಣವನ್ನು ಪಣವಾಗಿಟ್ಟುಕೊಂಡು ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಇಸ್ಪೀಟು (ಜುಗಾರಿ) ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಅಚ್ಲಾಡಿ ಗ್ರಾಮದ ಗರಿಕೆಮಠದ ಬಳಿಯಲ್ಲಿರುವ ಹಾಡಿಯಲ್ಲಿ ನಡೆದಿದೆ.

ಶಿರಿಯಾರ ಗ್ರಾಮದ ಸೈಬ್ರಕಟ್ಟೆಯ ಜನತಾ ಕಾಲೋನಿಯ ನಿವಾಸಿ ಮಂಜುನಾಥ (31 ವರ್ಷ), ಅಚ್ಲಾಡಿ ಗ್ರಾಮದ ಗಿರಿಕೆಮಠದ ನಿವಾಸಿ ಪಳನಿಕುಮಾರ್ (31 ವರ್ಷ), ಅಚ್ಲಾಡಿ ಗ್ರಾಮದ ಗಿರಿಕೆಮಠದ ನಿವಾಸಿ ಬಸವರಾಜ್ ( 41 ವರ್ಷ), ಅಚ್ಲಾಡಿ ಗ್ರಾಮದ ಗಿರಿಕೆಮಠದ ನಿವಾಸಿ ನಾಗರಾಜ್ (46 ವರ್ಷ) ಎಂಬವರೇ ಬಂಧನಕ್ಕೆ ಒಳಗಾದವರು.

ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಧು ಬಿ.ಇ ಅವರ ನೇತೃತ್ವದ ಪೊಲೀಸರ ತಂಡ ಬ್ರಹ್ಮಾವರ ತಾಲೂಕಿನ ಅಚ್ಲಾಡಿ ಗ್ರಾಮದ ಗಿರಿಕೆಮಠದ ಬಳಿಯಲ್ಲಿರುವ ಹಾಡಿಯ ಸಾರ್ವಜನಿಕ ಸ್ಥಳದಲ್ಲಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಅಲ್ಲದೇ ಅವರ ಬಳಿಯಲ್ಲಿದ್ದ 4,350 ರೂಪಾಯಿ ಹಾಗೂ ಜುಗಾರಿ ಆಟಕ್ಕೆ ಬಳಸಿದ ಕಾರ್ಡ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಕೋಟ ಠಾಣೆಯ ಪೊಲೀಸರು ಪ್ರಕರಣ ದಾಖಲಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : Mangaluru hindu worker death: ನೇತ್ರಾವತಿ ನದಿಯಲ್ಲಿ ಹಿಂದೂ ಕಾರ್ಯಕರ್ತನ ಶವ ಪತ್ತೆ: ಸಾವಿನ ಸುತ್ತ ಹಲವು ಶಂಕೆ

ಇದನ್ನೂ ಓದಿ : Mother got suicide with childrens: 3 ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

Panipat Cylinder Blast 6 family members killed in house fire

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular