Permission for Hijab allowance: ಪಿಯುಸಿ ಪರೀಕ್ಷೆ ವೇಳೆ ಹಿಜಾಬ್‌ಗೆ ಅನುಮತಿ ಕೋರಿ ಅರ್ಜಿ: ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ನವದೆಹಲಿ: (Permission for Hijab allowance) ಕರ್ನಾಟಕದ ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಹಾಕಿಕೊಂಡು ವಾರ್ಷಿಕ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೋರಿ ವಿದ್ಯಾರ್ಥಿಗಳ ಗುಂಪೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಇಂದು ಸಮ್ಮತಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ಪೀಠವು ಪಟ್ಟಿಗಾಗಿ ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸಲಾಗುವುದು ಎಂದು ಹೇಳಿದೆ.

ಮಾರ್ಚ್‌ 9 ರಂದು ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಸರಕಾರಿ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ವಿದ್ಯಾರ್ಥಿನಿಯರ ಪರವಾಗಿ ವಕೀಲ ಶಾದನ್‌ ಫರಾಸತ್‌ ಅವರು ಪೀಠಕ್ಕೆ ಮನವಿ ಮಾಡಿದರು.

ಈಗಾಗಲೇ ಹಿಜಾಬ್‌ ವಿವಾದದಿಂದ ವಿದ್ಯಾರ್ಥಿಗಳು ಒಂದು ವರ್ಷ ಕಳೆದುಕೊಂಡಿದ್ದು, ಪರಿಹಾರ ನೀಡದಿದ್ದರೆ ಇನ್ನೊಂದು ವರ್ಷ ಕಳೆದುಕೊಳ್ಳಬೇಕಾಗುತ್ತದೆ ಎಂದರು. ಮತ್ತೊಂದು ವರ್ಷ ನಷ್ಟ ಆಗದೇ ಇರಲು ಅವರಿಗೆ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಈ ಎಲ್ಲಾ ವಿದ್ಯಾರ್ಥಿಗಳು ಈಗಾ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಪರೀಕ್ಷೆ ಬರೆಯಲು ಸರಕಾರಿ ಕಾಲೇಜಿಗೆ ತೆರಳಬೇಕು. ಹೀಗಾಗಿ ಅಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪಿಯು ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಕ್ಕೆ ಸಂಬಂಧಿಸಿದಂತೆ 2022 ರ ಅಕ್ಟೋಬರ್‌ 12 ರಂದು ಸುಪ್ರೀಂ ಕೋರ್ಟ್‌ ನ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿತ್ತು. ಅಲ್ಲದೇ ತ್ರಿಸದಸ್ಯ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು. ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ ಕರ್ನಾಟಕ ಸರ್ಕಾರ ಕಳೆದ ವರ್ಷ ಫೆಬ್ರವರಿ 5ರಂದು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಎತ್ತಿಹಿಡಿದಿತ್ತು. 10 ದಿನಗಳ ವಿಚಾರಣೆ ಬಳಿಕ ಅದು, ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗುರುತುಗಳನ್ನು ಧರಿಸುವುದು ಸರಿಯಲ್ಲ ಎಂದು ಹೇಳಿತ್ತು. ಅದರ ವಿರುದ್ಧ ಸುಪ್ರೀಂಕೋರ್ಟ್‌ಗೆ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಇದನ್ನೂ ಓದಿ : Aadhaar registration for own land: ಸ್ವಂತ ಭೂಮಿಗೂ ಆಧಾರ್‌ ನೊಂದಣಿ ಅಗತ್ಯ: ಕೆಂದ್ರ ಸರಕಾರದ ಮಹತ್ವದ ಘೋಷಣೆ

ಇದನ್ನೂ ಓದಿ : Couple died: ಆರತಕ್ಷತೆಗೂ ಮೊದಲೇ ಹೆಣವಾದ ನವದಂಪತಿಗಳು

ಇದನ್ನೂ ಓದಿ : Wheat price: ಗೋಧಿ ಮತ್ತು ಹಿಟ್ಟಿನ ಬೆಲೆ ಬಗ್ಗೆ ಮೋದಿ ಸರಕಾರದಿಂದ ಮಹತ್ವದ ನಿರ್ಧಾರ

Permission for Hijab allowance: Application seeking permission for Hijab during PUC examination: Supreme Court agrees to the inquiry

Comments are closed.