ನವದೆಹಲಿ : ದೇಶದ ಅನ್ನದಾತರ ನೆರವಿಗಾಗಿ ಈಗಾಗಲೇ ಸ್ಥಾಪಿಸಾಗಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಯೋಜನೆಯ ಮೂಲಕ ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ನಾಳೆ ರೈತರ ಖಾತೆಗಳಿಗೆ 2000 ರೂಪಾಯಿಯನ್ನು ಜಮೆಯಾಗಲಿದೆ.
ಪಿಎಂ ಕಿಸಾನ್ ಯೋಜನೆಯ ಮೂಲಕ ರೈತರ ಖಾತೆಗಳಿಗೆ ಕೇಂದ್ರ ಸರಕಾರ ಹಣವನ್ನು ಹಾಕುತ್ತಿದೆ. ಈಗಾಗಲೇ ಎಂಟು ಕಂತಗಳ ಮೂಲಕ ಪ್ರತೀ ರೈತರಿಗೂ ಸುಮಾರು 16 ಸಾವಿರ ರೂಪಾಯಿ ಹಣ ಪಾವತಿ ಮಾಡಲಾಗಿದೆ. ಇದೀಗ 9 ನೇ ಕಂತಿನ ಹಣ ಆಗಸ್ಟ್ 9 ರಂದು ಅಂದರೆ ಸೋಮವಾರ ರೈತರ ಖಾತೆಗೆ ಜಮಾ ಆಗಲಿದೆ.
ಆಗಸ್ಟ್ 9 ರಂದು ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಣ ಬಿಡುಗಡೆ ಮಾಡಲಿರುವ ಮೋದಿ, ಬಳಿಕ ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಯೋಜನೆಯ ಮೂಲಕ 9ನೇ ಕಂತಿನಲ್ಲಿ 19,500 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು 9.75 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ ವರ್ಗಾಯಿಸಲಾಗುತ್ತದೆ.
ಪಿಎಂ-ಕಿಸಾನ್ ಯೋಜನೆಯಡಿ, ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ಆರ್ಥಿಕ ಸಹಾಯ ನೀಡಲಾಗುತ್ತದೆ. ನಾಲ್ಕು ತಿಂಗಳಿಗೆ ಒಂದು ಬಾರಿ ಮೂರು ಕಂತುಗಳಲ್ಲಿ 2 ಸಾವಿರ ರೂಪಾಯಿಯನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ.