ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಶ್ರೀರಕ್ಷೆ ಸಿಕ್ಕಿದೆ. ಕರ್ನಾಟಕದ ಅಭಿವೃದ್ದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ನಮೋ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಈ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆಯಲ್ಲಿ ಮೋದಿ ಬೊಮ್ಮಾಯಿ ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ. ಉತ್ತಮವಾಗಿ ಆಡಳಿ ನಡೆಸಿ ಎಂದು ಕಿವಿಮಾತು ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಅವರ ಭೇಟಿಯ ಬೆನ್ನಲ್ಲೇ ಟ್ವೀಟ್ ಮಾಡಿರುವ ನರೇಂದ್ರ ಮೋದಿ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.