ಕೋಲ್ಕತ್ತಾ : ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿಗೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಈಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣೆ ಹಿಂಸಾಚಾರಕ್ಕೆ ಹೆಸರುವಾಸಿಯಾದ ಬಂಗಾಳದಲ್ಲಿ ಸುಗಮವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆಯೋಗ ಬಿಗಿ ಕ್ರಮ ಕೈಗೊಂಡಿದೆ.
ಈ ಹಿಂದೆ ಎರಡು ಬಾರಿ ಮಮತಾ ಅವರನ್ನು ಈ ಕ್ಷೇತ್ರದ ಜನ ಆಯ್ಕೆ ಮಾಡಿದ್ದರು. ಬದಲಾದ ರಾಜಕೀಯ ಲೆಕ್ಕಾಚಾರದಲ್ಲಿ ಮಮತಾ ಕಳೆದ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರ ಪಕ್ಷ ಟಿಎಂಸಿ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾದ ಮಮತಾ ಅವರಿಗೆ ಸ್ಥಾನ ಉಳಿಸಿಕೊಳ್ಳಲು ಈ ಉಪಚುನಾವಣೆ ಗೆಲುವು ಅನಿವಾರ್ಯವಾಗಿದೆ.
ಇದನ್ನೂ ಓದಿ: Navjot Singh Sidhu : ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿದ್ದು ರಾಜೀನಾಮೆ
ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಸಿಪಿಎಂನ ಶ್ರೀಜಿಬ್ ಬಿಸ್ವಾಸ್ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಝೆಯವರೆಗೂ ನಡೆಯಲಿದೆ. ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳಲು ಮಮತಾ ಹೋರಾಡುತ್ತಿದ್ದಾರೆ,
ದಕ್ಷಿಣ ಕೊಲ್ಕತ್ತಾದ ಭವಾನಿಪುರ್ ಮತ್ತು ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ಕ್ಷೇತ್ರಗಳಲ್ಲಿಯೂ ಉಪಚುನಾವಣೆಗೆ ಮತದಾನ ನಡೆಯುತ್ತಿದೆ. ಅಕ್ಟೋಬರ್ 3 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ.
ಇದನ್ನೂ ಓದಿ: Kanhaiya Kumar: ಕೊನೆಗೂ ಕಾಂಗ್ರೆಸ್ ಕೈ ಹಿಡಿದ ಕನ್ನಯ್ಯ ಕುಮಾರ್ ಮತ್ತು ಜಿಗ್ನೇಶ್ ಮೇವಾನಿ
(Decision of Bengal CM fate at Bhawanipur)