Prashant Kishor : ಪುರಾತನ ಪಕ್ಷವಾದ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವನಗೊಳಿಸಲು ಸಬಲೀಕರಣ ಕ್ರಿಯಾ ಗುಂಪಿನ ಭಾಗವಾಗಿ ಪಕ್ಷಕ್ಕೆ ಸೇರುವ ಬಗ್ಗೆ ತಿಂಗಳುಗಟ್ಟಲೇ ನಡೆಸಲಾಗಿದ್ದ ಮಾತುಕತೆಯನ್ನು ಅಂತ್ಯಗೊಳಿಸಿದ ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯ ಆಹ್ವಾನವನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಮುಂದಿನ ಸಾರ್ವತ್ರಿಕ ಚುನಾವಣೆಗೆ 137 ವರ್ಷಗಳಷ್ಟು ಹಳೆಯದಾದ ಕಾಂಗ್ರೆಸ್ ಪಕ್ಷಕ್ಕೆ ಹೊಸ ಮುಖ ಹಾಗೂ ಕಾರ್ಯತಂತ್ರಗಳ ಅಗತ್ಯವಿದೆ ಎಂಬ ಅರಿವಿದ್ದರೂ ಸಹ ಪ್ರಶಾಂತ್ ಕಿಶೋರ್ರಿಗೆ ಪಕ್ಷದಲ್ಲಿ ಮುಕ್ತ ಅಧಿಕಾರ ನಡೆಸಲು ಅವಕಾಶ ನೀಡಲು ಕಾಂಗ್ರೆಸ್ ನಿರಾಕರಿಸಿತು ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಹಾಗೂ ಚುನಾವಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಕಾಂಗ್ರೆಸ್ನ ಪ್ರಸ್ತಾಪವನ್ನು ನಾನು ನಿರಾಕರಿಸಿದ್ದೇನೆ. ನನ್ನ ವಿನಮ್ರ ಅಭಿಪ್ರಾಯದ ಪ್ರಕಾರ ಪರಿವರ್ತನೆಯ ಸುಧಾರಣೆಗಳ ಮೂಲಕ ಆಳವಾಗಿ ಬೇರೂರಿರುವ ರಚನಾತ್ಮಕ ಸಮಸ್ಯೆಗಳನ್ನು ಸರಿಪಡಿಸಲು ಪಕ್ಷಕ್ಕೆ ನಾಯಕತ್ವ ಮತ್ತು ಸಾಮೂಹಿಕ ಇಚ್ಛಾಶಕ್ತಿಯ ಅಗತ್ಯವಿದೆ. ,” ಕಾಂಗ್ರೆಸ್ ತನ್ನ ನಿರ್ಧಾರವನ್ನು ಘೋಷಿಸಿದ ಸ್ವಲ್ಪ ಸಮಯದ ನಂತರ ಪ್ರಶಾಂತ್ ಕಿಶೋರ್ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.
ಪ್ರಶಾಂ್ ಕಿಶೋರ್ ಜೊತೆಗಿನ ಚರ್ಚೆಗಳನ್ನು ಅನುಸರಿಸಿ ಕಾಂಗ್ರೆಸ್ ಅಧ್ಯಕ್ಷಕರು 2024ರ ಅಧಿಕಾರಯುತ ಕ್ರಿಯಾ ಗುಂಪನ್ನು ರಚಿಸಿದ್ದಾರೆ. ಹಾಗೂ ಈ ಗುಂಪಿನಲ್ಲಿ ನಿರ್ದಿಷ್ಟ ಜವಾಬ್ದಾರಿಯೊಂದಿಗೆ ಪಕ್ಷಕ್ಕೆ ಸೇರಲು ಪ್ರಶಾಂತ್ ಕಿಶೋರ್ರನ್ನು ಆಹ್ವಾನಿಸಲಾಗಿದೆ. ಆದರೆ ಈ ಆಹ್ವಾನವನ್ನು ಕಿಶೋರ್ ನಿರಾಕರಿಸಿದ್ದಾರೆ. ಪ್ರಶಾಂತ್ ಕಿಶೋರ್ರ ಪ್ರಯತ್ನಗಳು ಹಾಗೂ ಪಕ್ಷಕ್ಕೆ ಅವರು ನೀಡಿದ ಸಲಹೆಗಳನ್ನು ನಾವು ಪ್ರಶಂಸಿಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ : psi appointment scam : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ರುದ್ರೇಗೌಡ ವಶಕ್ಕೆ
ಇದನ್ನೂ ಓದಿ : Aadhaar PAN link : ನಿಮ್ಮ ಆಧಾರ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಆಗಿದೆಯಾ ? ಮೊಬೈಲ್‌ನಲ್ಲೇ ಚೆಕ್ ಮಾಡಿ
Prashant Kishor Declines Offer To Join Congress