Punjab election : ಫೆಬ್ರವರಿಯಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷವು ಪಂಜಾಬ್ಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಭಗವಂತ್ ಮಾನ್ ಅವರ ಹೆಸರನ್ನು ಘೋಷಣೆ ಮಾಡಿದೆ. ಪಂಜಾಬ್ನಲ್ಲಿ ಆಪ್ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪಕ್ಷವು ಸಾರ್ವಜನರಿಕೆ ಅವಕಾಶ ನೀಡಿತ್ತು . ಅದರಂತೆ ಸಿಎಂ ಅಭ್ಯರ್ಥಿ ಹೆಸರು ಸೂಚಿಸಲು ಪಕ್ಷವು ದೂರವಾಣಿ ಮಾರ್ಗಗಳನ್ನು ತೆರೆದ ಬಳಿಕ ಈ ನಿರ್ಧಾರವನ್ನು ಪ್ರಕಟಿಸಿದೆ. ಪಂಜಾಬ್ ಚುನಾವಣೆಗೆ ತನ್ನ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆಪ್ ಬರೋಬ್ಬರಿ 22 ಲಕ್ಷ ದೂರವಾಣಿ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಭಗವಂತ್ ಮಾನ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲು ಬಯಸುವುದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಕಳೆದ ವಾರ ಹೇಳಿಕೆ ನೀಡಿದ್ದರು. ಸಂಗ್ರೂರ್ ಸಂಸದ ಪಂಜಾಬ್ ಸಿಎಂ ಅಭ್ಯರ್ಥಿ ಆಯ್ಕೆಯ ನಿರ್ಧಾರವನ್ನು ಜನರ ಮೇಲೆ ಬಿಡಬೇಕು ಎಂದು ಒತ್ತಾಯಿಸಿದ್ದರು.
2017ರ ಪಂಜಾಬ್ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಆಮ್ ಆದ್ಮಿ ಪಕ್ಷವು ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಚುನಾವಣೆಯನ್ನು ಎದುರಿಸಿತ್ತು. ಆದರೆ ಪಂಜಾಬ್ನಲ್ಲಿ ಸರ್ಕಾರ ರಚಿಸುವಲ್ಲಿ ಪಂಜಾಬ್ ಎಡವಿತ್ತು. 20 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷ ಎನಿಸಿಕೊಂಡಿತು. ಆದರೆ ಕಳೆದ ಬಾರಿ ಮಾಡಿದ ತಪ್ಪು ಈ ಬಾರಿ ಆಗಬಾರದು ಎಂಬ ಕಾರಣಕ್ಕೆ ಆಮ್ ಆದ್ಮಿ ಪಕ್ಷವು ಪಂಜಾಬ್ನಲ್ಲಿ ತನ್ನ ಸಿಎಂ ಅಭ್ಯರ್ಥಿಯನ್ನು ಈ ಬಾರಿ ಮೊದಲೇ ಆಯ್ಕೆ ಮಾಡುತ್ತೇವೆ ಎಂದು ಆರಂಭಿಕ ದಿನಗಳಿಂದಲೂ ಜನರಿಗೆ ಹೇಳುತ್ತಲೇ ಬಂದಿತ್ತು.
2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ, ಆಮ್ ಆದ್ಮಿ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಚುನಾವಣೆಗೆ ಹೋದರು ಆದರೆ ಸರ್ಕಾರ ರಚಿಸಲು ವಿಫಲವಾಯಿತು. ಇದು 20 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾಯಿತು. ಈ ಬಾರಿ, ಎಎಪಿ ರಾಷ್ಟ್ರೀಯ ಸಂಚಾಲಕರು ಚುನಾವಣೆಗೆ ಮುಂಚಿತವಾಗಿ ಪಕ್ಷವು ತನ್ನ ಸಿಎಂ ಮುಖವನ್ನು ಘೋಷಿಸುತ್ತದೆ ಎಂದು ಆರಂಭಿಕ ದಿನಗಳಿಂದಲೂ ಮತದಾರರಿಗೆ ಭರವಸೆ ನೀಡಿದರು.
Punjab election: AAP announces Bhagwant Mann as its chief ministerial candidate
ಇದನ್ನು ಓದಿ : Dolo 650 : ಹುಬ್ಬೇರಿಸುತ್ತೆ ಕಳೆದ 2 ವರ್ಷಗಳಲ್ಲಿ ದೇಶದಲ್ಲಿ ಮಾರಾಟವಾದ ಡೋಲೋ 650 ಮಾತ್ರೆಗಳ ಸಂಖ್ಯೆ
ಇದನ್ನೂ ಓದಿ : Samantha comeback Bollywood : ಮತ್ತೆ ಸದ್ದು ಮಾಡಿದ ಸಮಂತಾ : ಬಾಲಿವುಡ್ ನಿಂದ ಬಂತು ಮೂರು ಸಿನಿಮಾ ಆಫರ್