ಜೈಪುರ : ಆರ್‌ಇಇ (Rajasthan Eligibility Exam) ಪರೀಕ್ಷೆ ಬರೆಯಲು ತೆರಳಿದ್ದ ವೇಳೆಯಲ್ಲಿ ವ್ಯಾನ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ವಾಹನದ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲಲಿಯೇ ಸಾವನ್ನಪ್ಪಿರುವ ಘಟನೆ ಜೈಪುರದ ಚಕ್ಸು ಹೆದ್ದಾರಿಯಲ್ಲಿ ನಡೆದಿದೆ.
ಜೈಪುರದ ಬರಾನ್‌ನಿಂದ್ ಆರ್‌ಇಇ ಪರೀಕ್ಷೆ ಬರೆಯಲು ವ್ಯಾನಿನಲ್ಲಿ ಸುಮಾರು 11 ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆಯಲ್ಲಿ ಚಕ್ಸುವಿನ ರಾಷ್ಟ್ರೀಯ ಹೆದ್ದಾರಿ 12ರ ನೆಮೋಡಿಯಾ ಬಳಿಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳಕ್ಕೆ ದಾಖಲಿಸಲಾಗಿದೆ.
ಲಾರಿಯೊಂದು ಮುಂದೆ ಸಾಗುತ್ತಿದ್ದು, ಹಿಂದಿನಿಂದ ಬರುತ್ತಿದ್ದ ವ್ಯಾನ್ ಚಾಲಕನಿಗೆ ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಇದೀಗ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬಾನಲ್ಲೇ ಮಧುಚಂದ್ರಕೆ, ಯುಗಪುರುಷ ಸಿನಿಮಾ ಶೈಲಿಯಲ್ಲಿ ಪತ್ನಿಯ ಕೊಲೆ ಯತ್ನ ! ಕೊನೆಗೆ ಚಾಕುವಿನಿಂದ ಇರಿದು ಕೊಲೆ
ಇದನ್ನೂ ಓದಿ : ಬೈಕಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ : ಐವರು ದುಷ್ಕರ್ಮಿಗಳಿಂದ ಕೃತ್ಯ
( Rajasthan 6 Reet Students Died In Road Accident Chaksu Jaipur )