IAS‌ ಅಧಿಕಾರಿಗಳ ಕಿತ್ತಾಟಕ್ಕೆ ಇತಿಶ್ರೀ ಹಾಡಿದ‌ ರಾಜ್ಯ ಸರಕಾರ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ,‌ ಆಯುಕ್ತೆ ಶಿಲ್ಪಾ ನಾಗ್ ವರ್ಗಾವಣೆ

ಬೆಂಗಳೂರು : ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ‌ ಮೈಸೂರು ಜಿಲ್ಲಾಧಿಕಾರಿ ರೋಹಿಣಿ‌ ಸಿಂಧೂರಿ‌ ಹಾಗೂ ಮೈಸೂರು ಮಹಾನಗರ ಪಾಲಿಗೆ ಆಯುಕ್ತರಾದ ಶಿಲ್ಪಾ ನಾಗ್ ಕಿತ್ತಾಟಕ್ಕೆ ರಾಜ್ಯ ಸರಕಾರ ಮಂಗಳ ಹಾಡಿದೆ. ಇಬ್ಬರನ್ನೂ ವರ್ಗಾವಣೆಗೊಳಿಸಿ ರಾಜ್ಯ ಸರಕಾರ‌ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದ ಬಗಾದಿ ಗೌತಮ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆಗೊಳಿಸ ಲಾಗಿದೆ. ಇನ್ನು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ಸ ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಇ-ಗವರ್ನೆನ್ಸ್ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸ ಲಾಗಿದ್ದು, ಅವರ‌ ಜಾಗಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಮಂಡಳಿಯ ಎಂಡಿ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೂತನ ಆಯುಕ್ತ ರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿರುವ ಶಿಲ್ಪಾ‌ನಾಗ್ ಅವರು ಸುದ್ದಿಗೋಷ್ಟಿ ನಡೆಸಿ ಮೈಸೂರು ಜಿಲಾಧಿಕಾರಿ ರೋಹಿಣಿ ‌ಸಿಂಧೂರಿ ವಿರುದ್ದ ಆರೋಪ ಮಾಡಿದ್ದರು. ತಮಗೆ ಜಿಲ್ಲಾಡಳಿತದಿಂದ ಯಾವುದೇ ಸಹಕಾರ‌ ಸಿಕ್ಕಿಲ್ಲ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನನ್ನನ್ನು ಟಾರ್ಗೆಟ್ ‌ಮಾಡಿ ದಬ್ಬಾಳಿಕೆ ಮಾಡುತ್ತಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಸಿಎಸ್‍ಆರ್ ಫಂಡ್‍ನಿಂದ ಕೆಲಸ ಮಾಡುತ್ತಿದ್ದೇವೆ‌ ಎಂದು ಕಣ್ಣೀರಿಟ್ಟಿದ್ದರು. ಅಲ್ಲದೇ ಐಎಎಸ್ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ಶಿಲ್ಪಾನಾಗ್ ಆರೋಪದ ಬೆನ್ನಲ್ಲೇ ರೋಹಿಣಿ ಸಿಂಧೂರಿ ಅವರು ಸ್ಪಷ್ಟನೆ ನೀಡುವ ಕಾರ್ಯವನ್ನು ಮಾಡಿದ್ದರು. ಶಿಲ್ಪಾ ನಾಗ್ ಆರೋಪ ವನ್ನು ತಳ್ಳಿ ಹಾಕಿದ್ದಾರೆ. ಸಿಎಸ್ ಆರ್ ಫಂಡ್ ಲೆಕ್ಕ ‌ಎಂದಿದ್ದೆ. ನನ್ನ ಗುರಿ ಕೊರೊನಾ ನಿಯಂತ್ರಣ ಮಾಡುವುದು ಎಂದು ಹೇಳಿಕೆ‌ ನೀಡಿದ್ದರು. ಇದರ ಬೆನ್ನಲ್ಲೇ ಇಬ್ಬರ ಜಗಳ ತಾರಕಕ್ಕೇರಿತ್ತು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳು ಇಬ್ಬರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದರು. ಆದರೂ ಇಬ್ಬರು ರಾಜಿಯಾಗಿರಲಿಲ್ಲ‌. ಇದೀಗ ರಾಜ್ಯ ಸರಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶಿಸಿದೆ.

Comments are closed.