ಮದ್ಯ ಕುಡಿಯೋ ಮುನ್ನ ಹುಷಾರ್…!!! ಸ್ಯಾನಿಟೈಸರ್ ಬಳಸಿ ಮದ್ಯ ತಯಾರಿಸುತ್ತಿದ್ದ 6 ಮಂದಿ ಬಂಧನ

ಚೆನ್ನೈ: ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯ ಹಿನ್ನೆಲೆಯಲ್ಲಿ ಮದ್ಯ ದೊರೆಯುತ್ತಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ಸ್ಯಾನಿಟೈಸರ್ ಬಳಸಿ ಮದ್ಯ ತಯಾರಿಸಿ ಜನರಿಗೆ ಮಾರಾಟ ಮಾಡುತ್ತಿದ್ದರು. ಇಂತಹ ಜಾಲವನ್ನು ಚೆನ್ನೈ ಪೊಲೀಸರು ಪತ್ತೆ ಹಚ್ಚಿದ್ದಾರೆ.

ತಮಿಳುನಾಡಿನಲ್ಲಿ ಲಾಕ್ ಡೌನ್ ಜಾರಿ ಮಾಡಿದ್ದು, ಮದ್ಯ ಮಾರಾಟಕ್ಕೂ ಬ್ರೇಕ್ ಹಾಕಲಾಗಿತ್ತು. ಈ ವೇಳೆಯಲ್ಲಿ ತಮಿಳುನಾಡಿನ ಕಡಲೂರು ಜಿಲ್ಲೆಯ ರಾಮನಾಥನ್ ಕುಪ್ಪಮ್‍ನಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮದ್ಯ ತಯಾರಿಕೆಗೆ ಸ್ಯಾನಿಟೈಸರ್ ಬಳಕೆ ಮಾಡಿರುವ ಕುರಿತು ಪೊಲೀಸರು ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ಯನ್ನು ನಡೆಸಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸ್ಯಾನಿಟೈಸರ್ ಬಳಕೆಯನ್ನು ಖಚಿತ ಪಡಿಸಿದ್ದಾರೆ. ದೇಶದ ಹಲವು ಕಡೆಗಳಲ್ಲಿ ಸ್ಯಾನಿಟೈಸರ್ ಕುಡಿದು ಸಾವನ್ನಪ್ಪಿರುವ ಘಟನೆಯ ಬೆನ್ನಲ್ಲೇ ಇದೀಗ ಮದ್ಯ ತಯಾರಿಕೆಗೆ ಸ್ಯಾನಿಟೈಸರ್ ಬಳಕೆ ಮಾಡಿರೋದು ಆತಂಕವನ್ನು ಮೂಡಿಸಿದೆ.

https://kannada.newsnext.live/bangalore-police-corona-vaccine-free-sale-dr-pushpeetha-arrest/

ಈ ಜಾಲ ಎಷ್ಟು ಸಮಯದಿಂದ ಸ್ಯಾನಿಟೈಸರ್ ಬಳಸಿ ಮದ್ಯ ತಯಾರಿ ಮಾಡಲಾಗಿತ್ತು ಅನ್ನುವ ಬಗ್ಗೆ ಪೊಲೀಸರು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಅಲ್ಲದೇ ಜಾಲ ಬೇರೆ ಕಡೆಗಳಲ್ಲಿಯೂ ಕಾರ್ಯ ನಿರ್ವಹಿಸಿದೆಯೇ ಅನ್ನೋ ಬಗ್ಗೆಯೂ ವಿಚಾರಣೆಯನ್ನು ನಡೆಸುತ್ತಿದ್ದಾರೆ.

Comments are closed.