Sharad Pawar: ಶರದ್ ಪವಾರ್ ಆರೋಗ್ಯದಲ್ಲಿ ವ್ಯತ್ಯಯ: ದಿಢೀರ್ ಆಸ್ಪತ್ರೆಗೆ ದಾಖಲು

ಮುಂಬೈ: Sharad Pawar admitted : ನ್ಯಾಷನಲ್ ಕಾಂಗ್ರೆಸ್ ಪಾರ್ಟಿ(NCP) ಮುಖ್ಯಸ್ಥ ಶರದ್ ಪವಾರ್ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶರದ್ ಪವಾರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನವೆಂಬರ್ 2ರಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಅದರಲ್ಲಿ ಶರದ್ ಪವಾರ್ ಅವರು ನವೆಂಬರ್ 2ರಂದು ಡಿಸ್ಚಾರ್ಜ್ ಆಗಲಿದ್ದಾರೆ. ನವೆಂಬರ್ 4 ಮತ್ತು 5ರಂದು ಶಿರಡಿಯಲ್ಲಿ ನಡೆಯಲಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಸಭೆಗಳಲ್ಲಿ ಶರದ್ ಪವಾರ್ ಭಾಗಿಯಾಗಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎನ್‍ಸಿಪಿ ಈ ಬಗ್ಗೆ ಅಧಿಕೃತ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಪವಾರ್ ಅವರಿಗೆ ಆನಾರೋಗ್ಯ ಉಂಟಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂದಿನ 3 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ತಿಳಿಸಿದೆ.

ಶರದ್ ಪವಾರ್ ಅವರು ಈ ಹಿಂದೆ ಅಂದರೆ ಕಳೆದ ವರ್ಷ ಏಪ್ರಿಲ್ ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆ ಸಂದರ್ಭದಲ್ಲಿ ಪಿತ್ತಕೋಶದಲ್ಲಿ ಕಲ್ಲು ಇರುವುದು ಪತ್ತೆಯಾಗಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಕೆಲ ದಿನಗಳ ಹಿಂದೆಯಷ್ಟೆ ಭಾರತ್ ಜೋಡೋ ಯಾತ್ರೆಗೆ ಶರದ್ ಪವಾರ್ ಬೆಂಬಲ ಸೂಚಿಸಿದ್ದರು. ಕಾಂಗ್ರೆಸ್ ಮುಖಂಡರಾದ ಅಶೋಕ್ ಚೌಹ್ಹಾಣ್ ಮತ್ತು ಬಾಳಾಸಾಹೇಬ್ ಥೋರಟ್ ತನ್ನನ್ನು ಭೇಟಿಯಾಗಿ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಯಾತ್ರೆಗೆ ಸಾಥ್ ನೀಡಬೇಕೆಂದು ಆಹ್ವಾನಿಸಿದ್ದರು ಎಂದು ಶರದ್ ಪವಾರ್ ತಿಳಿಸಿದ್ದರು.

ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಬೆಂಬಲಿತ ಅಭ್ಯರ್ಥಿಯಾಗಿ ಶರತ್ ಪವಾರ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ ರಾಷ್ಟ್ರಪತಿ ಚುನಾವಣೆ ರೇಸ್ ನಲ್ಲಿ ತಾನಿಲ್ಲ, ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಅವರು ಷ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: Priyanka Chopra : ಅಭಿಮಾನಿಗಳಿಗೆ ಸಿಹಿಸುದ್ದಿ : 3 ವರ್ಷಗಳ ಬಳಿಕ ಭಾರತಕ್ಕೆ ಬರಲಿದ್ದಾರೆ ಪ್ರಿಯಾಂಕಾ ಚೋಪ್ರಾ

ಇದನ್ನೂ ಓದಿ: Nandini Milk Price Hike : ನಂದಿನಿ ಹಾಲಿನ ದರ 3 ರೂಪಾಯಿ ಏರಿಕೆ ?

Sharad Pawar: NCP chief Sharad Pawar admitted to Mumbai hospital after his health deteriorates

Comments are closed.