national mourning : ಶಿಂಜೋ ಅಬೆ ನಿಧನದ ಪ್ರಯುಕ್ತ ಭಾರತದಲ್ಲಿ ಒಂದು ದಿನ ಶೋಕಾಚರಣೆ

ದೆಹಲಿ : national mourning  : ಜಪಾನ್​ನ ದೀರ್ಘಾವಧಿಯ ನಾಯಕ, ಮಾಜಿ ಪ್ರಧಾನಿ ಶಿಂಜೋ ಅಂಬೆ ಸಂಸತ್​ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಗುಂಡೇಟಿಗೆ ಬಲಿಯಾಗಿದ್ದಾರೆ. ದಕ್ಷಿಣ ಜಪಾನ್​ನ ನಾರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ಜಪಾನ್​ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ. ಶಿಂಜೋ ಅಬೆ ನಿಧನದ ಬಗ್ಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಜಪಾನ್​ನ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನದ ಹಿನ್ನೆಲೆಯಲ್ಲಿ ಭಾರತದಲ್ಲಿ ಶನಿವಾರದಂದು ರಾಷ್ಟ್ರೀಯ ಮಟ್ಟದಲ್ಲಿ ಶೋಕಾಚರಣೆ ಆಚರಿಸಲಾಗುತ್ತದೆ ಎಂದು ಆದೇಶಿಸಿದ್ದಾರೆ.


ಜಪಾನ್​ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ನಮ್ಮ ಗೌರವದ ಸಂಕೇತವಾಗಿ ಜುಲೈ 9ರಂದು ಒಂದು ದಿನದ ಶೋಕಾಚರಣೆಯನ್ನು ರಾಷ್ಟ್ರಾದ್ಯಂತ ಆಚರಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟಾಯಿಸಿದ್ದಾರೆ.


ಟೋಕಿಯೋದಲ್ಲಿ ಶಿಂಜೋ ಅಬೆಯವರೊಂದಿಗೆ ಇದ್ದ ಪೋಟೋವನ್ನು ಪ್ರಧಾನಿ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಟೋಕಿಯೋದಲ್ಲಿ ನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆಯೊಂದಿಗಿನ ನನ್ನ ಇತ್ತೀಚಿನ ಭಾವಚಿತ್ರವನ್ನು ಹಂಚಿಕೊಳ್ಳುತ್ತಿದ್ದೇನೆ. ಭಾರತ ಹಾಗೂ ಜಪಾನ್ ನಡುವಿನ ಸಂಬಂಧವನ್ನು ಬಲಪಡಿಸುವ ಬಗ್ಗೆ ಶಿಂಜೋ ಎಂದಿಗೂ ಉತ್ಸುಕರಾಗಿದ್ದರು ಎಂದು ಪ್ರಧಾನಿ ಮೋದಿ ಟ್ವೀಟಾಯಿಸಿದ್ದಾರೆ .

ಇದಕ್ಕೂ ಮುನ್ನ, ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂಕಟ ವ್ಯಕ್ತಪಡಿಸಿದ್ದರು.. “ನನ್ನ ಆತ್ಮೀಯ ಸ್ನೇಹಿತ ಅಬೆ ಶಿಂಜೋ ಮೇಲಿನ ದಾಳಿಯಿಂದ ತೀವ್ರ ದುಃಖವಾಗಿದೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರೊಂದಿಗೆ. ಅವರ ಕುಟುಂಬ ಹಾಗೂ ಜಪಾನ್​ನ ಜನತೆಯೊಂದಿಗೆ ಇರಲಿದೆ ಎಂದು ಟ್ವೀಟಾಯಿಸಿದ್ದರು.

ಇದನ್ನು ಓದಿ : Vikram Admitted To Hospital : ತಮಿಳು ನಟ ವಿಕ್ರಮ್​ ಆರೋಗ್ಯದಲ್ಲಿ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಇದನ್ನೂ ಓದಿ : Petrol will be banned : ದೇಶದಲ್ಲಿ ಶೀಘ್ರದಲ್ಲೇ ಪೆಟ್ರೋಲ್​ಗೆ ನಿಷೇಧ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ

Shinzo Abe assassination: India to observe one-day national mourning on July 9, announces PM Narendra Modi

Comments are closed.