ಯಾದಗಿರಿ : ಲಾಕ್‍ಡೌನ್ ಸಂಕಷ್ಟದಿಂದ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ 6 ಮಂದಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ರುವ ಹೃದಯ ವಿದ್ರಾಹಕ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ.
ಭೀಮರಾಯ್, ಪತ್ನಿ ಶಾಂತಮ್ಮ ಹಾಗೂ ಮಕ್ಕಳಾದ ಸುಮಿತ್ರಾ, ಶ್ರೀದೇವಿ, ಲಕ್ಷ್ಮೀ, ಶಿವರಾಜ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಭೀಮ ರಾಯ್ ಕೃಷಿಗಾಗಿ ಸಾಲ ಮಾಡಿಕೊಂಡಿದ್ದ, ಆದರೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಾಲ ತೀರಿಸಲು ಸಾಧ್ಯವಾಗಿಲ್ಲ. ತನ್ನ ಕುಟುಂಬದ ಜೊತೆಗೆ ಜಮೀನಿಗೆ ತೆರಳಿದ ಭೀಮರಾಯ್ ತನ್ನ ಮಕ್ಕಳ ಕೈ ಕಾಲು ಕಟ್ಟಿ ಕೃಷಿ ಹೊಂಡಕ್ಕೆ ಹಾಕಿದ್ದಾನೆ. ನಂತರ ಪತ್ನಿಯ ಜೊತೆಗೆ ತಾನೂ ಕೃಷಿಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಎಸ್ಪಿ ವೇದಮೂರ್ತಿ, ಎಸಿ ಪ್ರಶಾಂತ್ ಹನಗಂಡಿ, ತಹಶೀಲ್ದಾರ ಜಗನ್ನಾಥ್ ರೆಡ್ಡಿ, ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಶಹಾಪುರ ಪೋಲಿಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಜಂಟಿ ಕಾರ್ಯಾ ಚರಣೆ ನಡೆಸಿ ಶವಗಳನ್ನು ಹೊರ ತೆಗೆದಿದ್ದಾರೆ.