ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ ಎಸ್ಎಸ್ಎಲ್‌ಸಿ ಪರೀಕ್ಷೆ, ಇಲ್ಲವಾದ್ರೆ ಪರೀಕ್ಷೆ ರದ್ದು : ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಮಾತ್ರ ವೇ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗುವುದು. ಒಂದೊಮ್ಮೆ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಳವಾದ್ರೆ ಪರೀಕ್ಷೆಯನ್ನೇ ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ‌.

ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವುದಾಗಿ ಸಚಿವ ಸುರೇಶ್​ ಕುಮಾರ್ ಹೇಳಿದ್ದಾರೆ. ಆದರೆ ಇದು ತಾತ್ಕಾಲಿಕ ನಿರ್ಧಾರವಾಗಿದೆ. ಕೊರೊನಾ ಸೋಂಕಿನ ನಿಯಂತ್ರಣದ ಸ್ಥಿತಿಗತಿಯನ್ನು ಅವಲೋಕಿಸಿ ತೀರ್ಮಾನ ವನ್ನು ಕೈಗೊಳ್ಳಲಾಗುತ್ತದೆ. ಒಂದೊಮ್ಮೆ ಸೋಂಕು ಹೆಚ್ಚಳವಾದ್ರೆ ಅನಿವಾರ್ಯವಾಗಿ ರದ್ದು ಮಾಡಲಾಗುತ್ತದೆ‌ ಎಂದಿದ್ದಾರೆ.

https://kannada.newsnext.live/sslc-students-bigshock-july-exam-date-fix/

ಇಂದು ಬೆಳಗ್ಗೆ ಸಚಿವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು‌ ಸುದ್ದಿ ಗೋಷ್ಟಿಯನ್ನು ನಡೆಸಿ, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡುವುದಾಗಿ ಘೋಷಣೆ ಮಾಡಿದ್ದರು.‌ ಅಲ್ಲದೇ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಜುಲೈ ಮೂರನೇ ವಾರದಲ್ಲಿ ‌ನಡೆಸುವುದಾಗಿಯೂ ಹೇಳಿದ್ದರು. ಆದರೆ ಇದೀಗ ಸಚಿವರು ಹಾಗೂ ಸಿಎಂ ಹೇಳಿಕೆಯಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಸಿಲುಕಿದ್ದಾರೆ.

https://kannada.newsnext.live/puc-exams-cancel-minister-suresh-kumar/

Comments are closed.