Vaishno Devi Stampede :ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 12 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು ಇದರಲ್ಲಿ 8 ಮಂದಿಯ ಗುರುತು ಪತ್ತೆಯಾಗಿದೆ. ಘಟನೆಯಲ್ಲಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಕ್ತಾದಿಗಳ ನಡುವೆ ಉಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದೆ .
ಅವಘಡದ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಬಿಸ್ಪಿ ಮುಖ್ಯಸ್ಥೆ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಇನ್ನು ಘಟನೆಯ ಬಗ್ಗೆ ಪ್ರಧಾನಿ ಮೋದಿ ಇಂಚಿಂಚೂ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಜಮ್ಮು & ಕಾಶ್ಮೀರದ ತ್ರಿಕೂಟ ಬೆಟ್ಟದ ಗರ್ಭಗುಡಿಯ ಹೊರಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ವೈಷ್ಣೋದೇವಿ ಭವನದಲ್ಲಿ ಅಪಾರ ಸಂಖ್ಯೆಯಲ್ಲಿ ಜನಸ್ತೋಮ ಸೇರಿತ್ತು. ಎಲ್ಲರೂ ಒಟ್ಟಾಗಿ ದೇಗುಲದ ಒಳಕ್ಕೆ ನುಗ್ಗಲು ಯತ್ನಿಸಿದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಕಾಲ್ತುಳಿತದಲ್ಲಿ 12 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಹಾಗೂ 14 ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅಧಿಕೃತ ಮಾಹಿತಿ ನೀಡಿದರು.
ಕೂಡಲೇ ಕಾರ್ಯಪ್ರವೃತ್ತರಾದ ರಕ್ಷಣಾ ಪಡೆಗಳು ಭಕ್ತರ ರಕ್ಷಣೆಗೆ ಧಾವಿಸಿವೆ ಎನ್ನಲಾಗಿದೆ. ಅಲ್ಲದೇ ವೈಷ್ಣೋದೇವಿ ಭವನದಲ್ಲಿ ನೆರೆದಿದ್ದ ಬಹುತೇಕ ಭಕ್ತರ ಬಳಿಯಲ್ಲಿ ಅನುಮತಿ ಪತ್ರ ಇರಲಿಲ್ಲ ಎಂದೂ ತಿಳಿದುಬಂದಿದೆ. ಘಟನೆ ಸಂಬಂಧ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಾತಾ ವೈಷ್ಣೋ ದೇವಿ ಭವನದಲ್ಲಿ ನೂಕುನುಗ್ಗಲಿನಿಂದ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ ಎಂದು ಟ್ವೀಟಾಯಿಸಿದ್ದಾರೆ.
ಇನ್ನು ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಸಿಗಲಿದೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.
ಇನ್ನು ಈ ವಿಚಾರವಾಗಿ ಟ್ವೀಟ್ ಮಾಡಿರುವ ಜಮ್ಮು ಕಾಶ್ಮೀರದ ಲೆಫ್ಟಿನಂಟ್ ಗವರ್ನರ್ ಮನೋಝ್ ಸಿನ್ಹಾ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ದೇಗುಲದ ಮಂಡಳಿ ಭರಿಸಲಿದೆ ಎಂದಿದ್ದಾರೆ.
stampede at mata vaishno devi bhawan in jammu kashmir
ಇದನ್ನು ಓದಿ : Maharashtra Lockdown : ಓಮಿಕ್ರಾನ್ ಆರ್ಭಟ ಮುಂಬೈನಲ್ಲಿ15 ದಿನ ಕಠಿಣ ನಿರ್ಬಂಧ, ಸಂಜೆ 5 ರಿಂದ ಬೆಳಿಗ್ಗೆ 5 ರವರೆಗೆ ಎಲ್ಲವೂ ಬಂದ್
ಇದನ್ನೂ ಓದಿ : Gujarat High Court : ದಂಪತಿ ನಡುವಿನ ಲೈಂಗಿಕ ಸಂಬಂಧದ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು