Sudhir Suri Shiv Sena Leader : ಗುಂಡಿಕ್ಕಿ ಶಿವಸೇನಾ ನಾಯಕ ಸುಧೀರ್ ಸೂರಿ ಹತ್ಯೆ :ದೇವಸ್ಥಾನದ ಬಳಿಯಲ್ಲೇ ದುರ್ಘಟನೆ

ಪಂಜಾಬ್ : ಅಮೃತಸರದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆಯಲ್ಲಿ ಅಪರಿಚಿತ ವ್ಯಕ್ತಿಗಳು ಶಿವಸೇನಾ ನಾಯಕ ಸುಧೀರ್ ಸೂರಿ (Sudhir Suri Shiv Sena Leader)ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸುಧೀರ್ ಸೂರಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ ಕೂಡ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಪಂಜಾಬ್‌ನ ಅಮೃತಸರದಲ್ಲಿನ ದೇವಸ್ಥಾನ ಹೊರ ಭಾಗದಲ್ಲಿ ಶಿವಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಈ ವೇಳೆಯಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಮೃತಸರ ಪೊಲೀಸ್ ಕಮಿಷನರ್ ಅರುಣ್ ಪಾಲ್ ಸಿಂಗ್ ಅವರ ಸಾವನ್ನು ಖಚಿತ ಪಡಿಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಅಮೃತಸರದ ದೇವಸ್ಥಾನದ ಆವರಣದ ಹೊರಗೆ ಕಸದ ಬುಟ್ಟಿಯಲ್ಲಿ ಕೆಲವು ವಿಗ್ರಹಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಸೇನಾ ಮುಖಂಡರು ದೇವಸ್ಥಾನದಲ್ಲಿ ಅಧಿಕಾರಿಗಳ ವಿರುದ್ದ ಧರಣಿ ನಡೆಸುತ್ತಿದ್ದರು. ಈ ವೇಳೆಯಲ್ಲಿ ಸ್ಥಳಕ್ಕೆ ಬಂದ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಜನವಸತಿ ಪ್ರದೇಶದಲ್ಲಿಯೇ ಈ ಘಟನೆ ನಡೆದಿದೆ. ಗುಂಪೊಂದು ಶಂಕಿತ ದಾಳಿಕೋರನನ್ನು ನಂತರ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶಂಕಿತ ದಾಳಿಕೋರನನ್ನು ಸಂದೀಪ್ ಸಿಂಗ್ ಎಂದು ಗುರುತಿಸಲಾಗಿದೆ

ದೇವಸ್ಥಾನದ ಬಳಿಯಲ್ಲಿಯೇ ಸುಧೀರ್ ಸೂರಿ (Sudhir Suri Shiv Sena Leader)ಅವರು ಪೊಲೀಸರ ಜೊತೆಗೆ ಮಾತನಾಡುತ್ತಿದ್ದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯಷ್ಟೇ ಸಮುದಾಯವೊಂದರ ವಿರುದ್ದ ಆಕ್ಷೇಪಾರ್ಯ ಭಾಷೆ ಬಳಕೆ ಹಾಗೂ ಧಾರ್ಮಿಕ ಭಾವನೆ ಕೆರಳಿಸುವ ಆರೋಪದ ಹಿನ್ನೆಲೆಯಲ್ಲಿ ಸುಧೀರ್ ಸೂರಿ ಬಂಧನಕ್ಕೆ ಒಳಗಾಗಿ ಸುದ್ದಿಯಾಗಿದ್ದರು.

ಇದನ್ನೂ ಓದಿ : Work at Home : ಶೇ.50ರಷ್ಟು ಸರಕಾರಿ ಉದ್ಯೋಗಿಗಳಿಗೆ ಮನೆಯಲ್ಲೇ ಕೆಲಸ : ಸರಕಾರದ ಆದೇಶ

ಇದನ್ನೂ ಓದಿ : Gujarat Election: ಗುಜರಾತ್ ಚುನಾವಣೆ ದಿನಾಂಕ ಘೋಷಣೆ; 2 ಹಂತದಲ್ಲಿ ಮತದಾನ: ಡಿ.8ರಂದು ಫಲಿತಾಂಶ ಪ್ರಕಟ

ಅಮೃತಸರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಶಿವಸೇನೆ ನಾಯಕ ಸುಧೀರ್ ಸೂರಿ ಸಾವಿನ ಬೆನ್ನಲ್ಲೇ ಬಿಜೆಪಿ ನಾಯಕ ತಜೀಂದರ್ ಸಿಂಗ್ ಬಗ್ಗಾ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ್ದಾರೆ.

Sudhir Suri Shiv Sena leader shot dead in Punjab’s Amritsar

Comments are closed.