BIG NEWS : ದೇಶದಲ್ಲಿ ಆಮ್ಲಜನಕದ ವಿತರಣೆ 12 ಮಂದಿಯ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ದೇಶದಾದ್ಯಂತ ಆಮ್ಲಜನಕ ಲಭ್ಯತೆ ಮತ್ತು ವಿತರಣೆಯನ್ನು ಮಾಡುವ ಸಲುವಾಗಿ 12 ಮಂದಿ ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯನ್ನು ಸುಪ್ರೀಂ ಕೋರ್ಟ್ ರಚನೆ ಮಾಡಿದೆ. ಕಾರ್ಯಪಡೆ ಒಂದ ವಾರದೊಳಗೆ ಕಾರ್ಯಾರಂಭ ಮಾಡಲಿದ್ದು, ವೈಜ್ಞಾನಿಕ, ತರ್ಕಬದ್ಧ ಮತ್ತು ನ್ಯಾಯಯುತ ಆಧಾರದ ಮೇಲೆ ಕಾರ್ಯಪಡೆ ಕಾರ್ಯ ನಿರ್ವಹಿಸಲಿದೆ.

ಕಾರ್ಯಪಡೆಯಲ್ಲಿ ಪಶ್ಚಿಮ ಬಂಗಾಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ.ಭಬತೋಷ್ ಬಿಸ್ವಾಸ್ ಮತ್ತು ಗುರಗಾಂವ್‌ನ ಮೆಡಂತಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಇಬ್ಬರು ಸದಸ್ಯರು ಸರ್ಕಾರದಿಂದ ಮತ್ತು ಕ್ಯಾಬಿನೆಟ್ ಕಾರ್ಯದರ್ಶಿ ಕನ್ವೀನಿಯರ್ ಆಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ವಿವಿಧ ರಾಜ್ಯಗಳಿಗೆ ಕೇಂದ್ರದ ಆಮ್ಲಜನಕದ ಹಂಚಿಕೆಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಪಡೆಯನ್ನು ಸ್ಥಾಪಿಸಲು ಸೂಚನೆಯನ್ನು ನೀಡಿದ್ದು, ಆಂಬ್ಯುಲೆನ್ಸ್‌ಗಳು, ಕೆಳ ಹಂತದ ಕೋವಿಡ್ ಆರೈಕೆ ಸೌಲಭ್ಯಗಳು ಮತ್ತು ಮನೆ ಸಂಪರ್ಕ ತಡೆಯನ್ನು ಹೊಂದಿರುವ ರೋಗಿಗಳಿಗೆ ಅಗತ್ಯ ಸೌಕರ್ಯಗಳನ್ನು ಪೂರೈಸುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಕೊರೊನಾ ಚಿಕಿತ್ಸೆಗೆ ಅಗತ್ಯವಾದ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲು ಕಾರ್ಯಪಡೆದ್ದು, ಕಾರ್ಯಪಡೆಯ ಕಾರ್ಯವಿಧಾನಗಳ ಕುರಿತು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರು ವಿವರಣೆಯನ್ನು ನೀಡಿದ್ದಾರೆ. ದೇಶದಾದ್ಯಂತ ಆಮ್ಲಜನಕ ಸಮಸ್ಯೆ ತಲೆದೋರಿರುವ ಬೆನ್ನಲ್ಲೇ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿನ್ನೆಯಷ್ಟೇ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆ ಮಾಡುವಂತೆ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಕಾರ್ಯಪಡೆಯನ್ನು ರಚನೆ ಮಾಡಿದೆ.

Comments are closed.