ಶಾಲೆಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್ ಪೂರೈಕೆಗೆ ಸುಪ್ರೀಂ ಆದೇಶ : ನಿಯಮ ಮೀರಿದ್ರೆ ಶಾಲೆಗಳ ಲೈಸೆನ್ಸ್ ಬಂದ್
ದೇಶದಲ್ಲಿರುವ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ವಿತರಿಸಬೇಕು ಎಂದು ಸುಪ್ರೀಂ ಕೋರ್ಟ್ ಖಡಕ್ ಆದೇಶ ಹೊರಡಿಸಿದೆ. ಜೈವಿಕವಾಗಿ ಕರಗಬಲ್ಲ ಮುಟ್ಟಿನ ಪ್ಯಾಡ್ಗಳನ್ನು ವಿತರಿಸುವ ಮೂಲಕ ಪರಿಸರಕ್ಕೆ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದೆ.
ಋತುಚಕ್ರದ ಆರೋಗ್ಯ ಮೂಲಭೂತ ಹಕ್ಕಾಗಿದೆ. ಹೀಗಾಗಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಸರ್ಕಾರಗಳು ಶಾಲೆಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್ ಹಂಚಿಕೆಯಾಗುತ್ತಿದೆಯೇ ಇಲ್ಲವೇ ಎಂಬುದರ ಮುತುವರ್ಜಿ ವಹಿಸಬೇಕು ಎಂದು ಹೇಳಿದೆ.
ಇನ್ನು ಇದರ ಜೊತೆಯಲ್ಲಿ ಶಾಲೆಗಳಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಶೌಚಾಲಯಗಳು ನಿರ್ಮಾಣಗೊಂಡಿರಬೇಕು. ಪ್ರತಿಯೊಂದು ಶಾಲೆಗಳು ಈ ನಿಯಮಗಳನ್ನು ಪಾಲಿಸುವುದು ಕಡ್ಡಾಯ. ಇಲ್ಲವಾದಲ್ಲಿ ಶಾಲೆಗಳ ಲೈಸೆನ್ಸ್ ರದ್ದಾಗಲಿದೆ ಹಾಗೂ ಇದರ ಹೊಣೆಯನ್ನು ಆಯಾ ಸರ್ಕಾರಗಳೇ ಹೊರಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.



