ಕೊರೊನಾದಿಂದ ಮೃತರಾದವರಿಗೆ ಪರಿಹಾರ ಕೊಡಿ : ಜನಪರ ಆದೇಶ ಕೊಟ್ಟ ಸುಪ್ರೀಂ ಕೋರ್ಟ್

ನವದೆಹಲಿ :  ಕೊರೊನಾ ವೈರಸ್ ಸೋಂಕು ಜನರನ್ನು ತತ್ತರಿಸುವಂತೆ ಮಾಡಿದೆ. ಕೊರೊನಾ ಸೋಂಕಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿ ದ್ದು, ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಸುಪ್ರೀಂಕೋರ್ಟ್ ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ಮಹತ್ವ ದ ಆದೇಶ ಹೊರಡಿಸಿದ್ದು, ಕೋವಿಡ್ ನಿಂದ ಮೃತ ಕುಟುಂಬಗಳಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡಲು ಆಗಲ್ಲ. ಹಾಗಾಗಿ ಎನ್‍ಡಿಎಂಎ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ) ಪ್ರತಿ ಕುಟುಂಬಕ್ಕೆ ಕನಿಷ್ಠ ಪರಿಹಾರ ಸಿಗುವಂತಹ ವ್ಯವಸ್ಥೆಯನ್ನ 6 ತಿಂಗಳ ಒಳಗೆ ರೂಪಿಸಬೇಕು ಎಂದು ಸೂಚಿಸಿದೆ.

ಕೊರೊನಾದಿಂದ ಮೃತರ ಕುಟುಂಬಕ್ಕೆ ವಿಪತ್ತು ಕಾಯ್ದೆಯಡಿ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳ ಲಾಗಿತ್ತು. ಇದೇ ಅರ್ಜಿಯಲ್ಲಿ ಕೋವಿಡ್‍ಗೆ ಸಂಬಂಧಿಸಿದ ಮರಣ ಪ್ರಮಾಣ ಪತ್ರ ನೀಡುವ ವ್ಯವಸ್ಥೆಯ ಸರಳೀಕರಣದ ಬಗ್ಗೆ ಕೇಳಲಾಗಿತ್ತು. ಈ ಸಂಬಂಧ ನ್ಯಾಯಾಲಯ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಸಲ್ಲಿಸಲಾಗಿತ್ತು.

ಕೊರೊನಾ ಸೋಂಕಿನಿಂದ ದೇಶದಲ್ಲಿ ಒಟ್ಟು 3,98,454 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‍ಗೆ ಸಂಬಂಧಿಸಿದ ಮರಣ ಪ್ರಮಾಣ ಪತ್ರಗಳನ್ನು ವಿತರಿಸಬೇಕು ಎಂದು ಸುಪ್ರೀಂಕೋರ್ಟ್ ಎನ್‍ಡಿಎಂಎಗೆ ನಿರ್ದೇಶನ ನೀಡಿದೆ. ಅಲ್ಲದೆ ಪರಿಹಾರ ನೀಡುವ ಬಗ್ಗೆ ಎನ್‍ಡಿಎಂಎ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಮಾರ್ಗಸೂಚಿ ರೂಪಿಸುವಲ್ಲಿ ವಿಫಲವಾಗಿದೆ ಎಂದು ಎನ್‍ಡಿಎಂಗೆ ನ್ಯಾಯಾಲಯ ಚಾಟಿ ಬೀಸಿತ್ತು.

ಇನ್ನು ಕೇಂದ್ರ ಸರಕಾರ ಕೊರೊನಾದಿಂದ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸಾಧ್ಯವಿಲ್ಲ. ಬದಲಾಗಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಸದೃಢ ಮಾಡಬೇಕಿದೆ. ವಿಪತ್ತು ಕಾಯ್ದೆಯಡಿಯಲ್ಲಿ ಮೃತರ ಕುಟುಂಬಕ್ಕೆ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಆದ್ರೆ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರ ಕುಟುಂಗಳಿಗೆ ಇದುವರೆಗೂ ಯಾವುದೇ ಪರಿಹಾರ ನೀಡಿಲ್ಲ ಎಂದು ಕೇಂದ್ರ ಸರಕಾರ ಹೇಳಿತ್ತು.

Comments are closed.